Thursday, March 27, 2025
Homeಬೆಂಗಳೂರುಸಿದ್ದರಾಮಯ್ಯ-ಸುರ್ಜೇವಾಲಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಸಿದ್ದರಾಮಯ್ಯ-ಸುರ್ಜೇವಾಲಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ರಣ್‍ದೀಪ್ ಸಿಂಗ್ ಸುರ್ಜೇವಾಲಾ ª ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆಂದು ಆರೋಪಿಸಿ ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ನೇತೃತ್ವದ ಬಿಜೆಪಿ ನಾಯಕರ ತಂಡವು ಗುರುವಾರ ಇವರಿಬ್ಬರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಸಿದ್ದರಾಮಯ್ಯನವರು ನೀತಿಸಂಹಿತೆ ಜಾರಿಯಾದ ಬಳಿಕ ವರುಣಾ ಕ್ಷೇತ್ರದಲ್ಲಿ ಪ್ರಚಾರ ಯಾತ್ರೆಯ ಸಂದರ್ಭದಲ್ಲಿ ಡೋಲು ಮತ್ತು ವಾಲಗ ಬಾರಿಸುವವರಿಗೆ 1000 ರೂ. ಹಣ ನೀಡಿದ್ದಾರೆಂದು ಆರೋಪಿಸಿದ ಬಿಜೆಪಿ ತತ್ಸಂಬದ ವಿಡಿಯೋ ಸಾಕ್ಷಿಯನ್ನು ಸಲ್ಲಿಸಿದೆ. ಜೊತೆಗೆ ಆದಾಯ ತೆರಿಗೆ ಅಧಿಕಾರಿಗಳನ್ನು ಚುನಾವಣಾ ಅಯೋಗ ನಿಯೋಜಿಸಿರುವುದೇ ಕಾಂಗ್ರೆಸ್ ಪಕ್ಷವನ್ನು ಕಟ್ಟಿಹಾಕುವ ಸಲುವಾಗಿ ಎಂದು ಸಿದ್ದರಾಮಯ್ಯ ನೀಡಿರುವ ಹೇಳಿಕೆಯ ವಿರುದ್ಧವೂ ದೂರು ದಾಖಲಿಸಲಾಗಿದೆ.
ರಣ್‍ದೀಪ್ ಸಿಂಗ್ ಸುರ್ಜೇವಾಲಾ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ, ಬಿಜೆಪಿಯ 40% ಸರ್ಕಾರ ರಾಜ್ಯವನ್ನು ಲೂಟಿ ಮಾಡಿದೆ ಎಂದು ಉಲ್ಲೇಖಿಸಿರುವುದರ ವಿರುದ್ಧ ಬಿಜೆಪಿ ಪ್ರತ್ಯೇಕವಾಗಿ ದೂರು ದಾಖಲಿಸಿದೆ.

ಹೆಚ್ಚಿನ ಸುದ್ದಿ

error: Content is protected !!