Saturday, January 25, 2025
Homeಟಾಪ್ ನ್ಯೂಸ್ಬಿಜೆಪಿ ಪಕ್ಷ ಸ್ಥಾಪನಾ ದಿನಾಚರಣೆ

ಬಿಜೆಪಿ ಪಕ್ಷ ಸ್ಥಾಪನಾ ದಿನಾಚರಣೆ

ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪಕ್ಷದ ಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ ಜೋ಼ಶಿ, ಸಂಸದ ಪಿ.ಸಿ.ಮೋಹನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಉತ್ತರ ಜಿಲ್ಲಾ ಅಧ್ಯಕ್ಷ ನಾರಾಯಣ್ ಮತ್ತಿತರರು ಭಾಗವಹಿಸಿದ್ದರು. ಪುಷ್ಪಾರ್ಚನೆ ಮತ್ತು ಧ್ವಜಾರೋಹಣ ನೆರವೇರಿಸಲಾಯಿತು.

ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಭಾಷಣವನ್ನು ಆಲಿಸುವ ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋ಼ಶಿ, ಸಂಸದ ಪಿ.ಸಿ.ಮೋಹನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ನಾರಾಯಣ್ ಮತ್ತಿತರರು ಪಾಲ್ಗೊಂಡಿದ್ದರು.

ಭಾರತೀಯ ಜನತಾ ಪಕ್ಷದ 44ನೇ ಸ್ಥಾಪನಾ ದಿನಾಚರಣೆಯ ಶುಭಾಶಯಗಳು. ತಮ್ಮ ತ್ಯಾಗ, ಶ್ರಮ ಮತ್ತು ನಿಸ್ವಾರ್ಥ ಸೇವೆಯಿಂದ ವಿಶ್ವದ ಅತಿದೊಡ್ಡ ಪಕ್ಷವನ್ನು ರೂಪಿಸಿದ ಕಾರ್ಯಕರ್ತರಿಗೆ ನಾನು ನಮಸ್ಕರಿಸುತ್ತೇನೆ. ಪ್ರಧಾನಮಂತ್ರಿಯವರ ನೇತೃತ್ವದಲ್ಲಿ ನಾವೆಲ್ಲರೂ ಅಂತ್ಯೋದಯ ಮತ್ತು ಸೇವೆಯ ಸಂಕಲ್ಪದೊAದಿಗೆ ಉತ್ತಮ ಭಾರತವನ್ನು ನಿರ್ಮಿಸಲು ಸಮರ್ಪಿತರಾಗಿದ್ದೇವೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಟ್ವೀಟ್ ಮಾಡಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!