ಬೆಳಗಾವಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಬೆಳಗಾವಿ ಚುನಾವಣಾ ಆಯೋಗ ಪ್ರಕರಣ ದಾಖಲಿಸಿಕೊಂಡಿದೆ. ಬುಧವಾರ ರಾತ್ರಿ ನಿಪ್ಪಾಣಿ ನಗರದಲ್ಲಿ ಅದ್ದೂರಿ ಮಹಿಳಾ ಕಾರ್ಯಕ್ರಮವೊಂದರಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಪಾಲ್ಗೊಂಡಿದ್ದರು.
ನಿಪ್ಪಾಣಿಯ ಮನ್ಸಿಪಲ್ ಹೈಸ್ಕೂಲಿನಲ್ಲಿ ಬುಧವಾರ ಸಂಜೆ ಮಹಿಳೆಯರಿಗಾಗಿ ಅರಿಶಿನ-ಕುಂಕುಮ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮ ಸಂಪೂರ್ಣ ಬಿಜೆಪಿ ಪ್ರೇರಿತ ಕಾರ್ಯಕ್ರಮವಾಗಿದ್ದು, ವೇದಿಕೆಯ ಮೇಲೆ ಪಕ್ಷದ ಚಿಹ್ನೆ, ಬಾವುಟ ಮತ್ತು ನಾಯಕರ ಚಿತ್ರಗಳನ್ನು ಪ್ರದರ್ಶಿಸಲಾಗಿತ್ತು. ಜೊತೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಜನರಿಗೆ ರಾತ್ರಿ ಊಟವನ್ನೂ ಸಹ ಆಯೋಜಿಸಲಾಗಿತ್ತು. ಇದು ನೀತಿಸಂಹಿತೆ ಸ್ಪಷ್ಟ ಉಲ್ಲಂಘನೆಯಾಗಿಎ ಎಂದು ಆಯೋಗವು ಉಲ್ಲೇಖಿಸಿದೆ.