ನವದೆಹಲಿ: ಕಳೆದ ಮೂರು ದಿನಗಳಿಂದ ಬಿಜೆಪಿ ಪಟ್ಟಿ ರಿಲೀಸ್ ಆಗುತ್ತೆ ಎಂದು ಕಾಯುತ್ತಿರುವ ಟಿಕೆಟ್ ಆಕಾಂಕ್ಷಿಗಳು ಮತ್ತೊಂದು ದಿನ ಕಾಯಬೇಕಿದೆ. ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಡಾಗಿದ್ದು ಬಿಜೆಪಿ ಆ ಕ್ಷೇತ್ರಗಳಲ್ಲಿ ಮರುಸರ್ವೆಯ ಮೊರೆಹೋಗಿದೆ.
ಇಂದು ಸಂಜೆ ವೇಳೆಗೆ ಸರ್ವೇ ಮಾಹಿತಿ ಪಕ್ಷದ ಕೈಸೇರಲಿದ್ದು, ನಾಳೆ ಅಥವಾ ನಾಡಿದ್ದು ಅಭ್ಯರ್ಥಿ ಪಟ್ಟಿ ಬಿಡುಗಡೆಯಾಗುತ್ತೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಹೇಳಿದ್ರು.
ನರೇಂದ್ರ ಮೋದಿ ನೇತೃತ್ವದಲ್ಲಿ 2 ಗಂಟೆ ಕಾಲ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಸುಮಾರು 150 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದೆ.
ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ. ಕೆಲ ಕ್ಷೇತ್ರಗಳ ಬಗ್ಗೆ ಇನ್ನೂ ಚರ್ಚೆ ಅಗತ್ಯವಿದೆ. ನಾಳೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಹೀಗಾಗಿ ನಾಳೆ ಅಥವಾ ನಾಡಿದ್ದು ಬಿಜೆಪಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ನಿನ್ನೆ ಸಭೆ ಬಳಿಕ ಸಿಎಂ ಬೊಮ್ಮಾಯಿ ಹೇಳಿದ್ದರು.
ಇಂದು ಸಂಜೆ 4 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ನಿವಾಸದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಸಭೆಯ ನಂತರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಮಾಹಿತಿ ಹೊರಬೀಳಲಿದೆ ಎಂದ್ರು