ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭಾಗಿದ್ದು, ಭಾರತೀಯ ಜನತಾ ಪಾರ್ಟಿಯ ಚುನಾವಣಾ ಅಭ್ಯರ್ಥಿಗಳ ಮೊದಲ ಪಟ್ಟಿ ನಾಳೆ ಬಿಡುಗಡೆ ಆಗಲಿದೆ.
ದೆಹಲಿಯ ಜೆ.ಪಿ ನಡ್ಡಾ ನಿವಾಸದಲ್ಲಿ ನೆನ್ನೆ ಸತತ 12 ಗಂಟೆಗಳ ಕಾಲ ಸಭೆ ನಡೆಸಲಾಗಿದ್ದು, ಸೋಮವಾರ ಮೊದಲ ಪಟ್ಟಿ ಬಿಡುಗಡೆ ಮಾಡಲು ತಯಾರಿ ನಡೆಸಲಾಗಿದೆ. ಇಂದೂ ಕೂಡಾ ಮಹತ್ವದ ಸಭೆ ಮುಂದುವರೆಯಲಿದ್ದು, ಮುಖ್ಯಮಂತ್ರಿ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಹಾಗೂ ಬಿಜೆಪಯ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ.
ಮೊದಲ ಹಂತದಲ್ಲಿ 150 ಅಭ್ಯರ್ಥಿಗಳ ಹೆಸರು ಘೋಷಿಸಲಾಗುವುದು ಎನ್ನಲಾಗುತ್ತಿದ್ದು, ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು 2ನೇ ಪಟ್ಟಿಯಲ್ಲಿ ಘೋಷಣೆಯಾಗಿಲಿದೆ. ಮೊದಲ ಪಟ್ಟಿ ಏಪ್ರಿಲ್ 10ಕ್ಕೆ ಹಾಗೂ 2ನೇ ಪಟ್ಟಿಯನ್ನು ಏಪ್ರಿಲ್ 13ರಂದು ಬಿಜೆಪಿ ಬಿಡುಗಡೆಗೊಳಿಸಲಿದೆ.
ಈ ಬಾರಿ ಹಲವು ಕ್ಷೇತ್ರಗಳಲ್ಲಿ ಅಚ್ಚರಿಯ ಅಭ್ಯರ್ಥಿಗೆ ಅವಕಾಶ ಸಿಗುವ ಬಗ್ಗೆ ಚರ್ಚೆಯಾಗುತ್ತಿದ್ದು, 20-25 ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗ್ತಿದೆ. ಹೀಗಾಗಿ ಹಲವು ಹಳೆಯ ಶಾಸಕರು ಟಿಕೆಟ್ ಕೈತಪ್ಪುವ ಭೀತಿಯಲ್ಲಿದ್ದಾರೆ