ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಪಕ್ಷದ ಚುನಾವಣಾ ಅಭ್ಯರ್ಥಿ ಪಟ್ಟಿ ಕುರಿತು ಚರ್ಚಿಸಲು ಇಂದು ಬಿಜೆಪಿ ಜಿಲ್ಲಾ ಕೋರ್ ಕಮಿಟಿ ಸಭೆ ನಡೆಸಲಾಗುತ್ತಿದೆ. ನೆಲಮಂಗಲದ ಖಾಸಗಿ ರೆಸಾರ್ಟ್ನಲ್ಲಿ 2 ದಿನ ನಡೆಯುವ ಈ ಸಭೆಯಲ್ಲಿ ಟಿಕೆಟ್ ಹಂಚಿಕೆ ಬಗ್ಗೆ ಚರ್ಚೆ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುತ್ತಿದ್ದು ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಳ್ಳಲಿದೆ.
ಈಗಾಗಲೇ ಜಿಲ್ಲಾ ಸಮಿತಿಗಳಿಂದ ಪ್ರತಿ ಕ್ಷೇತ್ರದಿಂದ ಮೂರು ಹೆಸರುಗಳನ್ನು ಪಡೆದುಕೊಂಡಿರುವ ರಾಜ್ಯ ಘಟಕ ಇದೀಗ ಪ್ರತಿ ಕ್ಷೇತ್ರದಿಂದ 2 ಹೆಸರುಗಳನ್ನು ಅಂತಿಮಗೊಳಿಸಿ ಹೈಕಮಾಂಡ್ಗೆ ಕಳುಹಿಸಲಿದೆ. ಏಪ್ರಿಲ್ ಮೊದಲ ವಾರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ