ನವದೆಹಲಿ: ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯ ಸರಣಿ ಸಭೆಗಳ ನಂತರವೂ ಬಿಜೆಪಿ ಟಿಕೆಟ್ ಬಿಕ್ಕಟ್ಟು ಬಗೆಹರಿದಂತೆ ಕಾಣುತ್ತಿಲ್ಲ. ಇಂದು (ಏಪ್ರಿಲ್ 9) ಕೇಂದ್ರ ಚುನಾವಣಾ ಸಮಿತಿಯ ಸಭೆಯ ನಂತರ ಮೋದಿ, ಜೆ.ಪಿ ನಡ್ಡಾ ಹಾಗೂ ಅಮಿತ್ ಶಾ ಪ್ರತ್ಯೇಕ ಸಭೆ ನಡೆಸಿಯೂ ಅಭ್ಯರ್ಥಿಗಳು ಇನ್ನೂ ಅಂತಿಮಗೊಂಡಿಲ್ಲ.
ಈ ಕುರಿತು ದೆಹಲಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಸೋಮವಾರ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು ಸೋಮವಾರ ಅಥವಾ ಮಂಗಳವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಬಹುದು ಎಂದ್ರು
ಮೊದಲ ಹಂತದಲ್ಲಿ 150ರಿಂದ 175 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡುವ ನಿರೀಕ್ಷೆ ಇದ್ದು ಕೆಲವೇ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಕ್ಷೇತ್ರದ ಹಾಲಿ ಶಾಸಕರಿಗೆ ಟಿಕೆಟ್ ಪಕ್ಕಾ ಆಗಿದೆ ಎಂಬ ಮಾಹಿತಿ ಇದೆ.