ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಮುಕ್ತಾಗೊಂಡಿದ್ದು ಯಾವುದೇ ಕ್ಷಣದಲ್ಲೂ ಅಭ್ಯರ್ಥಿ ಪಟ್ಟಿ ರಿಲೀಸ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ
ನರೇಂದ್ರ ಮೋದಿ, ಜೆ.ಪಿ ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಘ್, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ನಳೀನ್‌ಕುಮಾರ್ ಕಟೀಲ್,ಸಿಟಿ ರವಿ ಸೇರಿದಂತೆ ಹಲವು ಪ್ರಮುಖ ನಾಯಕರು ನಡೆಸಿದ ಸಭೆಯಲ್ಲಿ ಹಲವು ಪ್ರಮುಖ ಚರ್ಚೆಗಳಾಗಿವೆ
ಚುನಾವಣಾ ಸಮಿತಿ ಸಭೆಯ ನಂತರ ಪ್ರಧಾನಿ ಮೋದಿ ಅಮಿತ್ ಶಾ ಹಾಗೂ ಜೆ.ಪಿ ನಡ್ಡಾ ಪ್ರತ್ಯೇಕ ಸಭೆ ನಡೆಸಿ ಅಂತಿಮ ತೀರ್ಮಾನ ಪ್ರಕಟಿಸಲಿದ್ದಾರೆ ಎನ್ನಲಾಗಿದೆ
ಇನ್ನು ಸಭೆಯಲ್ಲಿ ಸಚಿವ ಸೋಮಣ್ಣ ಮಗನಿಗೆ ಟಿಕೆಟ್ ನಿರಾಕರಿಸಲಾಗಿದ್ದು, ಸೋಮಣ್ಣಗೆ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ಕ್ಷೇತ್ರ ವರುಣಾ ದಿಂದ ಸ್ಪರ್ಧಿಸುವಂತೆ ಸೂಚನೆ ನೀಡಲಾಗಿದೆಯಂತೆ. ಅದಲ್ಲದೇ ಡಿ.ಕೆ ಶಿವಕುಮಾರ್ ಸ್ಪರ್ಧಿಸುವ ಕನಕಪುರ ಕ್ಷೇತ್ರ ಹಾಗೂ ಕುಮಾರಸ್ವಾಮಿ ವಿರುದ್ಧವೂ ಪ್ರಬಲ ಒಕ್ಕಲಿಗ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಚಿಂತಿಸಲಾಗಿದೆಯಂತೆ
ಇನ್ನು ಹಲವು ಕ್ಷೇತ್ರಗಳಲ್ಲಿ ಹೊಸಬರಿಗೆ ಅವಕಾಶ ನೀಡಲೂ ಚಿಂತಿಸಲಾಗಿದ್ದು ಕೆಲವೆಡೆ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.