Sunday, July 7, 2024
Homeಟಾಪ್ ನ್ಯೂಸ್Boat capsize : ಕೃಷ್ಣಾ ನದಿ ನಡುಗಡ್ಡೆಯಲ್ಲಿ ಜೂಜಾಟ - ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಆರು...

Boat capsize : ಕೃಷ್ಣಾ ನದಿ ನಡುಗಡ್ಡೆಯಲ್ಲಿ ಜೂಜಾಟ – ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಆರು ಮಂದಿ ಸಾವು!

ವಿಜಯಪುರ: ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಮಂದಿ ನೀರುಪಾಲಾಗಿರುವ ದುರ್ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಓರ್ವನ ಮೃತದೇಹ ಪತ್ತೆಯಾಗಿದೆ. ನಡುಗಡ್ಡೆಯಲ್ಲಿ ಎಂಟು ಮಂದಿ ಇಸ್ಪೀಟ್‌ ಆಡುತ್ತಿದ್ದರು. ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲು ಹೋಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿಯ ಕೃಷ್ಣಾ ನದಿಯಲ್ಲಿ ಆರು ಮಂದಿ ನೀರುಪಾಲಾಗಿರುವ ಶಂಕೆ ವ್ಯಕ್ತವಾಗಿದೆ. ಪುಂಡಲಿಕ ಎಂಕಂಚಿ (34) ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಉಳಿದವರ ಶೋಧ ಕಾರ್ಯ ಮುಂದುವರಿದಿದೆ.

ನದಿ ಆಚೆಯ ನಡುಗಡ್ಡೆಗೆ ತೆರಳಿ ವಾಪಸ್‌ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕೊಲ್ಹಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಹೆಚ್ಚುವರಿ ಎಸ್‌ಪಿ ಶಂಕರ ಮಾರಿಹಾಳ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಹೆಚ್ಚಿನ ಸುದ್ದಿ