Sunday, July 7, 2024
Homeಟಾಪ್ ನ್ಯೂಸ್JOB ALERT: ಬ್ಯಾಂಕ್ ಆಫ್ ಬರೋಡಾದಲ್ಲಿ ಕೆಲಸ ಖಾಲಿ ಇದೆ; ಅರ್ಜಿ ಸಲ್ಲಿಸಲು ಜೂ.30 ಕೊನೆ...

JOB ALERT: ಬ್ಯಾಂಕ್ ಆಫ್ ಬರೋಡಾದಲ್ಲಿ ಕೆಲಸ ಖಾಲಿ ಇದೆ; ಅರ್ಜಿ ಸಲ್ಲಿಸಲು ಜೂ.30 ಕೊನೆ ದಿನ

ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಒಟ್ಟು 1 ಬ್ಯುಸಿನೆಸ್ ಕರೆಸ್ಪಾಂಡೆಂಟ್​ ಸೂಪರ್​ವೈಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜೂನ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​​​ಲೈನ್ ಮೂಲಕ ಅರ್ಜಿ ಹಾಕಬೇಕು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ವಿದ್ಯಾರ್ಹತೆ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ, ಎಂಬಿಎ, ಎಂಸಿಎ, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 10,000-15,000 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಪ್ರಾದೇಶಿಕ ವ್ಯವಸ್ಥಾಪಕರು
ಬ್ಯಾಂಕ್ ಆಫ್ ಬರೋಡಾ
ಪ್ರಾದೇಶಿಕ ಕಛೇರಿ
R.E.B ಎನ್ಕ್ಲೇವ್
ನೆಲ ಮಹಡಿ
ದುಗ್ಗಮ್ಮ ದೇರಣ್ಣ ಹಾಲ್ ಹತ್ತಿರ
ಬೈಪಾಸ್ ರಸ್ತೆ
ದರ್ಬೆ ಪುತ್ತೂರು
ದಕ್ಷಿಣ ಕನ್ನಡ
ಕರ್ನಾಟಕ-574202

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/06/2024

ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 30, 2024

ಹೆಚ್ಚಿನ ಸುದ್ದಿ