Sunday, July 7, 2024
Homeಲೈಫ್ ಸ್ಟೈಲ್JOB ALERT: BOBCARD ಲಿಮಿಟೆಡ್ ನಲ್ಲಿ ಪದವಿ ಪಾಸಾದವರಿಗೆ ಉದ್ಯೋಗ; ಅರ್ಜಿ ಸಲ್ಲಿಸಲು ಮೇ 30...

JOB ALERT: BOBCARD ಲಿಮಿಟೆಡ್ ನಲ್ಲಿ ಪದವಿ ಪಾಸಾದವರಿಗೆ ಉದ್ಯೋಗ; ಅರ್ಜಿ ಸಲ್ಲಿಸಲು ಮೇ 30 ಕೊನೆ ದಿನಾಂಕ

BOBCARD ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಸ್ವಾಧೀನ ವ್ಯವಸ್ಥಾಪಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಶೈಕ್ಷಣಿಕ ಅರ್ಹತೆ:
BOBCARD ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ ಪೂರ್ಣಗೊಳಿಸಿರಬೇಕು.

ವಯೋಮಿತಿ:
BOBCARD ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ಗುಜರಾತ್​
ತೆಲಂಗಾಣ
ಕರ್ನಾಟಕ
ತಮಿಳುನಾಡು

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14/05/2024

ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 30, 2024

ಹುದ್ದೆ ಕುರಿತು ಹೆಚ್ಚಿನ ಮಾಹಿತಿಗಾಗಿ https://www.bobcard.co.in/ ಈ ವೆಬ್ಸೆಟ್ ಗೆ ಭೇಟಿ ನೀಡಬಹುದು.

ಹೆಚ್ಚಿನ ಸುದ್ದಿ