Thursday, July 10, 2025
Homeಟಾಪ್ ನ್ಯೂಸ್ಕರ್ನಾಟಕದ ಗಡಿ ಭಾಗದಲ್ಲಿ ಮಹಾರಾಷ್ಟ್ರದ ಯೋಜನೆ: ಸಿಎಂ ಬೊಮ್ಮಾಯಿ ಖಂಡನೆ

ಕರ್ನಾಟಕದ ಗಡಿ ಭಾಗದಲ್ಲಿ ಮಹಾರಾಷ್ಟ್ರದ ಯೋಜನೆ: ಸಿಎಂ ಬೊಮ್ಮಾಯಿ ಖಂಡನೆ

ಕರ್ನಾಟಕ ಗಡಿಭಾಗದ ಜನರಿಂದ ಮಹಾರಾಷ್ಟ್ರಕ್ಕೆ ಸೇರಿದವರೆಂದು ಏಕನಾಥ್‌ ಶಿಂಧೆ ಸರ್ಕಾರ ಘೋಷಣಾ ಪತ್ರಗಳನ್ನು ಸ್ವೀಕರಿಸುತ್ತಿರುವುದನ್ನು ಸಿಎಂ ಬೊಮ್ಮಾಯಿ ಖಂಡನೆ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಗಡಿ ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ಯೋಜನೆಯನ್ನು ವಿಸ್ತರಿಸಿದೆ. ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಗೊಂದಲ ಸೃಷ್ಟಿಸುತ್ತಿದೆ. ಕರ್ನಾಟಕದ ಗಡಿಯಲ್ಲಿರುವವರಿಗೆ ವಿಮೆ ನೀಡುವ ಆದೇಶ ಮಾಡಿರುವುದು ಉದ್ದಟತನ, ಇದು ಎರಡು ರಾಜ್ಯಗಳ ನಡುವಿನ ಬಾಂಧವ್ಯ ಕದಡುವ ಪ್ರಯತ್ನ ಎಂದು ಬೊಮ್ಮಾಯಿ ಹೇಳಿದ್ದಾರೆ.

ಅಮಿತ್‌ ಶಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಹಾಗೂ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಗಡಿ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಸೃಷ್ಟಿಸುವುದಿಲ್ಲ ಎಂದು ಒಪ್ಪಿಕೊಂಡಿದ್ದರು. ಈಗ ಕರ್ನಾಟಕದ 865 ಗ್ರಾಮಗಳ ಜನತೆಗೆ ಬಾಬು ಜಗಜೀವನ್ ರಾಮ್ ಆರೋಗ್ಯ ವಿಮೆ ಯೋಜನೆ ಜಾರಿಗೆ ಆದೇಶ ಮಾಡಿರುವುದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಎಂದು ಸಿಎಂ ಹೇಳಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಇದೇ ರೀತಿ ಉದ್ದಟತನ ಮುಂದುವರೆಸಿದರೆ ಕರ್ನಾಟಕ ಸರ್ಕಾರವೂ ಕೂಡ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಾಗುವುದು. ಕರ್ನಾಟಕ ಗಡಿಯಲ್ಲಿರುವ ಜನರಿಗೆ ವಿಮೆ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರ ಸರ್ಕಾರ, ಅವರಿಂದ ಮಹಾರಾಷ್ಟ್ರಕ್ಕೆ ಸೇರಿದವರೆಂದು ಘೋಷಣಾ ಪತ್ರ ತೆಗೆದುಕೊಳ್ಳುವುದು ಖಂಡನೀಯ ಎಂದು ಬೊಮಮಾಯಿ ಹೇಳಿದ್ದಾರೆ.

ಹೆಚ್ಚಿನ ಸುದ್ದಿ

While viewing the website, tap in the menu bar. Scroll down the list of options, then tap Add to Home Screen.
Use Safari for a better experience.
error: Content is protected !!