ರಾಜ್ಯದ ಮುಂದಿನ ಸಿಎಂ ನಾನೇ ಎಂದು ಹೇಳಿದ್ದ ಬಸವರಾಜ್ ಬೊಮ್ಮಾಯಿಗೆ ಬಿಎಸ್‌ವೈ ಬಳಿಕ ಸಂಸದ ತೇಜಸ್ವಿ ಸೂರ್ಯ ಕೂಡಾ ದನಿ ಗೂಡಿಸಿದ್ದಾರೆ. ನಾನೇ ಮತ್ತೆ ಮುಖ್ಯಮಂತ್ರಿಯಾಗಲಿದ್ದೇನೆ’ ಎಂಬುದಾಗಿ ಬಸವರಾಜ ಬೊಮ್ಮಾಯಿ ಹೇಳಿರುವುದು ನೂರಕ್ಕೆ ನೂರು ನಿಜ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಯಾದಗಿರಿಯಲ್ಲಿ ಮಾತನಾಡಿದ ಸೂರ್ಯ, ರಾಜ್ಯದಲ್ಲಿ ಬಿಜೆಪಿಗೆ ಬಹುಮತ ಬರುವುದರಲ್ಲಿ ಯಾವುದೇ ಅನುಮಾನ ಇಲ್ಲ. ಬಸವರಾಜ ಬೊಮ್ಮಾಯಿ ಅವರು ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಬಿಎಸ್ ವೈ ಮತ್ತು ಬೊಮ್ಮಾಯಿ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ಉತ್ತಮ ಅಭಿವೃದ್ಧಿ ಕೆಲಸವಾಗಿದೆ. ಸರ್ಕಾರದ ಯೋಜನೆಗಳ ಫಲಾನುಭವಿಗಳು ನಮ್ಮ ಕೈ ಬಿಡಲ್ಲ ಎಂದು ಅವರು ಹೇಳಿದ್ದಾರೆ.
ಅದಕ್ಕೂ ಮುನ್ನ ಬಿಎಸ್‌ವೈ ಕೂಡಾ, ಬೊಮ್ಮಾಯಿ ಹೇಳೀಕೆಗೆ ಯಾವುದೇ ಆಕ್ಷೇಪ ಎತ್ತಿರಲಿಲ್ಲ. ಬಸವರಾಜ್ ಬೊಮ್ಮಾಯಿ ಸಿಎಂ ಹೇಳಿಕೆಗೆ ಸ್ವಾಗತ ಎಂದು ಬಿಎಸ್‌ವೈ ಹೇಳಿದ್ದರು.
ನಾನು ಮತ್ತೆ ಸಿಎಂ ಆಗುತ್ತೇನೆಂದು ಸಿಎಂ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದ, ಬಿಎಸ್‌ವೈ, ಸಿಎಂ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡಿದ್ದಾರೆ. ಮತ್ತೊಮ್ಮೆ ಸಿಎಂ ಆಗುತ್ತೇನೆ ಎಂದು ಹೇಳಿರುವುದರಲ್ಲಿ ತಪ್ಪಿಲ್ಲ. ಸಿಎಂ ಬೊಮ್ಮಾಯಿ ಹೇಳಿಕೆ ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.