ಬ್ರೆಜಿಲ್: ಬ್ರೆಜಿಲ್‌ನಲ್ಲಿ (Brazil ) ಸಣ್ಣ ವಿಮಾನವೊಂದು (Aeroplane ) ವಸತಿ ಸಮುಚ್ಚಯಕ್ಕೆ ಡಿಕ್ಕಿ ಹೊಡೆದು ಪತನಗೊಂಡಿರುವ (Crash )ಆಘಾತಕಾರಿ ಘಟನೆ ನಡೆದಿದೆ.
ಈ ಭೀಕರ ಅಪಘಾತದಲ್ಲಿ ಪೈಲಟ್ ಸೇರಿದಂತೆ ವಿಮಾನದಲ್ಲಿದ್ದ ಒಟ್ಟು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬ್ರೆಜಿಲ್‌ನ ಜನನಿಬಿಡ ವಸತಿ ಪ್ರದೇಶವೊಂದರಲ್ಲಿ ಈ ದುರಂತ ಸಂಭವಿಸಿದೆ. ವಿಮಾನವು ಹಾರಾಟ ನಡೆಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ನೇರವಾಗಿ ಜನವಸತಿ ಇರುವ ಕಟ್ಟಡಕ್ಕೆ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ವಿಮಾನವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಟ್ಟಡದ ಒಂದು ಭಾಗಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್, ಕಟ್ಟಡದ ಒಳಗಿದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.
ತಾಂತ್ರಿಕ ದೋಷ ಅಥವಾ ಎಂಜಿನ್ ವೈಫಲ್ಯ ಈ ಪತನಕ್ಕೆ ಪ್ರಮುಖ ಕಾರಣವಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸ್ಥಳಕ್ಕೆ ಧಾವಿಸಿರುವ ರಕ್ಷಣಾ ತಂಡಗಳು ಮೃತದೇಹಗಳನ್ನು ಹೊರತೆಗೆದಿದ್ದು, ಮೃತರ ಗುರುತು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.
ಸ್ಥಳೀಯ ಅಧಿಕಾರಿಗಳು ಅಪಘಾತದ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ವಿಮಾನವು ವಸತಿ ಪ್ರದೇಶದಲ್ಲಿ ಬಿದ್ದಿದ್ದರಿಂದ ಸ್ಥಳೀಯ ನಿವಾಸಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ : ಪಕ್ಷದೊಳಗಿನ ಗೊಂದಲಗಳಿಗೆ ಹೈಕಮ್ಯಾಂಡ್ ತೆರೆಯೆಳೆಯಲಿ – ಪರಂ ಆಗ್ರಹ