Friday, March 13, 2026
Homeಟಾಪ್ ನ್ಯೂಸ್IND Vs PAK: ಭಾರತಕ್ಕೆ ಬ್ರೆಜಿಲ್ ಬೆಂಬಲ- ಉಗ್ರರನ್ನು ನಾಶ ಮಾಡಿ ಎಂದ ಡ ಸಿಲ್ವಾ

IND Vs PAK: ಭಾರತಕ್ಕೆ ಬ್ರೆಜಿಲ್ ಬೆಂಬಲ- ಉಗ್ರರನ್ನು ನಾಶ ಮಾಡಿ ಎಂದ ಡ ಸಿಲ್ವಾ

ಬ್ರೆಜಿಲ್:‌ ಭಾರತದ ಪ್ರಧಾನಿ ನರೇಂದ್ರ ಮೋದಿ ಜೊತೆ ಬ್ರೆಜಿಲ್ ಅಧ್ಯಕ್ಷ ಲುಲಾ ಡ ಸಿಲ್ವಾ ದೂರವಾಣಿಯಲ್ಲಿ ಸಂಭಾಷಣೆ ನಡೆಸಿದ್ದಾರೆ. ಭಯೋತ್ಪಾದನೆ ವಿರುದ್ಧದ ಯುದ್ಧದಲ್ಲಿ ಭಾರತಕ್ಕೆ ಬ್ರೆಜಿಲ್ ಬೆಂಬಲ ಇದೆ ಎಂದು ಪುನರುಚ್ಚರಿಸಿದ್ದಾರೆ.

ಸಂತ್ರಸ್ತರ ಕುಟುಂಬಗಳಿಗೆ ಬ್ರೆಜಿಲ್ ಅಧ್ಯಕ್ಷರು ಸಂತಾಪ ಸೂಚಿಸಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಗಳನ್ನು ಖಂಡಿಸಿದೆ. ಪಾಕಿಸ್ತಾನದಲ್ಲಿ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ಭಾರತ ಸರ್ಕಾರ ಪ್ರಾರಂಭಿಸಿದ ಆಪರೇಷನ್ ಸಿಂಧೂರ್‌ ಕಾರ್ಯಾಚರಣೆಯ ಬಗ್ಗೆಯೂ ಲುಲಾ ಡ ಸಿಲ್ವಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ಬ್ರೆಜಿಲ್ ಅಧ್ಯಕ್ಷ ಲುಲಾ ಡಿ ಸಿಲ್ವಾ ಪ್ರಧಾನಿ ನರೇಂದ್ರ ಮೋದಿಯವರಿಗೆ ಕರೆ ಮಾಡಿ, ಭಾರತದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಾದ ಜೀವಹಾನಿಗೆ ಸಂತಾಪ ಸೂಚಿಸಿದರು’ ಎಂದು MEA ವಕ್ತಾರ ರಣಧೀರ್ ಜೈಸ್ವಾಲ್ X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಹೆಚ್ಚಿನ ಸುದ್ದಿ

Change Language »
error: Content is protected !!