Wednesday, August 19, 2026
Homeಟಾಪ್ ನ್ಯೂಸ್BREAKING NEWS: 15 ಸಾವಿರ ಶಿಕ್ಷಕರ ನೇಮಕಾತಿಗೆ ಸಿಎಂ ನೇತೃತ್ವದ ಸಚಿವ ಸಂಪುಟ ಸಭೆ ಹಸಿರು...

BREAKING NEWS: 15 ಸಾವಿರ ಶಿಕ್ಷಕರ ನೇಮಕಾತಿಗೆ ಸಿಎಂ ನೇತೃತ್ವದ ಸಚಿವ ಸಂಪುಟ ಸಭೆ ಹಸಿರು ನಿಶಾನೆ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಯನ್ನು ಎದುರು ನೋಡುತ್ತಿದ್ದವರಿಗೆ ರಾಜ್ಯ ಸರ್ಕಾರವು ಭರ್ಜರಿ ಸುದ್ದಿ ನೀಡಿದೆ. ಸುಮಾರು 15 ಸಾವಿರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರ ನೇತೃತ್ವದಲ್ಲಿ ಇಂದು (ಜು.19) ನಡೆದ ಮಹತ್ವದ ಸಚಿವ ಸಂಪುಟ (Cabinet Meeting) ಸಭೆಯಲ್ಲಿ ಅಧಿಕೃತ ಅನುಮೋದನೆ ನೀಡಲಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಸ್ವತಃ ಸಿಎಂ ಡಿ.ಕೆ. ಶಿವಕುಮಾರ್ ಅವರೇ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು. ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಲು ಈ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಬಹಳ ದಿನಗಳಿಂದ ನನೆಗುದಿಗೆ ಬಿದ್ದಿದ್ದ ಈ ನೇಮಕಾತಿ ಪ್ರಕ್ರಿಯೆಗೆ ಸಂಪುಟ ಸಭೆಯಲ್ಲಿ ಹಸಿರು ನಿಶಾನೆ ಸಿಕ್ಕಿರುವುದರಿಂದ, ಶೀಘ್ರದಲ್ಲೇ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸುವ ಪ್ರಕ್ರಿಯೆ ಆರಂಭವಾಗಲಿದೆ. ಸರ್ಕಾರದ ಈ ನಿರ್ಧಾರದಿಂದಾಗಿ ಸಾವಿರಾರು ಆಕಾಂಕ್ಷಿಗಳಿಗೆ ಉದ್ಯೋಗಾವಕಾಶ ಸಿಗಲಿದ್ದು, ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ದೊಡ್ಡ ನೆರವಾಗಲಿದೆ.

‘ಬಿತ್ತನೆ ಮಾಡಿ ನೀರು ಬಿಡಿ ಎನ್ನುವುದು ಸರಿಯಲ್ಲ’

ಇನ್ನು ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ರಾಜ್ಯದ ಬರದ ಸ್ಥಿತಿ ಬಗ್ಗೆ ಚರ್ಚಿಸಲು ಸಿಎಂ ಖುದ್ದು ಇಂದು ನಡೆಸಿದ ಸಭೆಯ ಕುರಿತು ಮಾಹಿತಿ ನೀಡಿರುವ ಅವರು, 178 ತಾಲೂಕುಗಳಲ್ಲಿ ಶೇ.60ರಷ್ಟು ಮಳೆ ಕೊರತೆ ಇದೆ. 158 ತಾಲೂಕುಗಳಲ್ಲಿ ಸಾಧಾರಣ ಮಳೆ ಆಗುತ್ತಿದೆ. ಶೇ.40ರಷ್ಟು ಮಾತ್ರ ಜಲಾಶಯಗಳಲ್ಲಿ ನೀರಿದೆ. ಡ್ಯಾಂಗಳಲ್ಲಿ ಸದ್ಯಕ್ಕೆ ಕುಡಿಯಲು ಮಾತ್ರ ನೀರು ಸಂಗ್ರಹವಿದೆ ಎಂದರು.

ಡ್ಯಾಂಗೆ ನೀರು ಬಂದರೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಹೀಗಾಗಿ ಬೆಳೆ ಹಾಕಿ ನೀರು ಬಿಡಿ ಎಂದು ಸರ್ಕಾರಕ್ಕೆ ಬೇಡಿಕೆ ಇಡುವುದು ಸರಿಯಲ್ಲ. ಆದ್ದರಿಂದ ಬಿತ್ತನೆ ಮಾಡಬೇಡಿ ಎಂದು ಮಂಡ್ಯ ರೈತರಲ್ಲಿ ಮುಖ್ಯಮಂತ್ರಿ ಇದೇ ವೇಳೆ ಮನವಿ ಮಾಡಿಕೊಂಡರು. ಇದಲ್ಲದೇ ಕುಡಿಯುವ ನೀರು ಸಮಸ್ಯೆ ನೀಗಿಸಲು ಪ್ರತಿ ತಾಲೂಕಿಗೆ ಹೆಚ್ಚುವರಿ 1 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಡಿಕೆಶಿಯವರು ತಿಳಿಸಿದರು.

ಇದನ್ನೂ ಓದಿ: ರಾಜ್ಯ ಬರಗಾಲದಲ್ಲಿದೆ..ಇವರಿಗೆ ಸಂಪುಟ ವಿಸ್ತರಣೆ ಚಿಂತೆ – ಸಚಿವರ ದೆಹಲಿ ವಾಸಕ್ಕೆ ಯತ್ನಾಳ್ ತೀವ್ರ ಆಕ್ರೋಶ

ಹೆಚ್ಚಿನ ಸುದ್ದಿ

Change Language »
error: Content is protected !!