Saturday, March 15, 2025
Homeಟಾಪ್ ನ್ಯೂಸ್BREAKING NEWS: ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯದವರಿಗೆ ಮೀಸಲಾತಿ, ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

BREAKING NEWS: ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯದವರಿಗೆ ಮೀಸಲಾತಿ, ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು : ರಾಜ್ಯ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯದವರಿಗೆ ಮೀಸಲಾತಿ ನೀಡುವ ವಿಚಾರವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಸರ್ಕಾರದ ಟೆಂಡರ್​​​​ನಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ಕುರಿತಾಗಿ ವಿಧೇಯಕ ಮಂಡಿಸಲು ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ರೂ.1ಕೋಟಿವರೆಗಿನ ಕಾಮಗಾರಿಗಳಲ್ಲಿ ಶೇ.4ರಷ್ಟು ಮೀಸಲಾತಿಯನ್ನು ಗುತ್ತಿಗೆಯಲ್ಲಿ ನೀಡಲು ಬಜೆಟ್​​ನಲ್ಲಿ ಘೋಷಿಸಿದಂತೆ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ.

ಈಗಾಗಲೇ ರಾಜ್ಯ ಕಾಂಗ್ರೆಸ್​​ ಸರ್ಕಾರವು ತುಷ್ಠೀಕರಣ ಮಾಡುತ್ತಿದೆ. ಅಲ್ಲದೇ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮುಸ್ಲಿಂ ಸಮುದಾಯದ ಮೀಸಲಾತಿಯನ್ನು ಹೆಚ್ಚಿಸಲು ಮುಂದಾಗಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ಹೊರಹಾಕುತ್ತಿರುವುದು ಗೊತ್ತೇ ಇದೆ.

ಹೆಚ್ಚಿನ ಸುದ್ದಿ

error: Content is protected !!