ಉತ್ತರ ಕನ್ನಡ : ಜ.19ರಂದು ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಗರ್ಭ ಧರಿಸಿದ್ದ ಹಸುವಿನ ಹತ್ಯೆ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸುವ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದಾಗ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಹೊನ್ನಾವರದ ಕಾಸರಗೋಡಿನಲ್ಲಿ ಈ ಘಟನೆ ನಡೆದಿದೆ. ಪ್ರಕರಣ ಸಂಬಂಧ ನಿನ್ನೆ ತೌಫಿಕ್ ಎಂಬುವವನನ್ನು ಪೊಲೀಸರು ಬಂಧಿಸಿದ್ದರು. ಇಂದು ಫೈಝಲ್ ಎಂಬ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ್ದಾನರ. ಈ ವೇಳೆ ಪೊಲೀಸರು ಆತ್ಮ ರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆಂದು ತಿಳಿದುಬಂದಿದೆ.
ಕೃಷ್ಣ ಆಚಾರಿ ಎಂಬುವವರಿಗೆ ಸೇರಿದ್ದ ಗರ್ಭ ಧರಿಸಿದ್ದ ಹಸುವನ್ನು ಹೊನ್ನಾವರದಲ್ಲಿ ಕೊಯ್ದು ರುಂಡ ಬೇರ್ಪಡಿಸಿ ಮಾಂಸವನ್ನು ಮಾತ್ರ ತೆಗೆದುಕೊಂಡು ಹೋಗಿದ್ದ ಆರೋಪಿಗಳು, ಮದುವೆ ಸಮಾರಂಭಕ್ಕೆ ಹಸುವಿನ ಮಾಂಸ ಬಳಸಿದ್ದರು ಎಂಬ ಆರೋಪ ಕೇಳಿ ಬಂದಿದೆ.