ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಸಂಸದರು ಹಾಗೂ 4 ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದ ಹಿರಿಯ ಮುತ್ಸದ್ದಿ ಎಂ.ಶ್ರೀನಿವಾಸ್ ಇಂದು ವಿಧವಶರಾಗಿದ್ದಾರೆ.
ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಗಿದ್ದ ಶ್ರೀನಿವಾಸ್ ಅವರ ಸಾವಿನ ಬಗ್ಗೆ ಕುಟುಂಬಸ್ಥರು ಖಚಿತ ಪಡಿಸಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಲಾಗಿದ್ದ ಶ್ರೀನಿವಾಸ್ ಅವರು, ಚಿಕಿತ್ಸೆ ಫಲಿಸದೇ ಅಸುನೀಗಿದ್ದಾರೆ. ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೃತ ಶ್ರೀನಿವಾಸ್ ರ ಅಂತ್ಯಕ್ರಿಯೆ ಒಕ್ಕಲಿಗ ಸಂಪ್ರದಾಯದಂತೆ ನಾಳೆ ಉತ್ತರಹಳ್ಳಿಯಲ್ಲಿ ನಡೆಯಲಿದೆ.