ಬೆಂಗಳೂರು: ಸಿಲಿಕಾನ್ ಸಿಟಿಯ ಹೃದಯಭಾಗದಲ್ಲೇ ಭೀಕರ ರಸ್ತೆ ಅಪಘಾತವೊಂದು (Collide) ಸಂಭವಿಸಿದೆ. ನಗರದ ಕೆ.ಆರ್. ಸರ್ಕಲ್ (KR Circle) ಬಳಿ ಎರಡು ಬಿಎಂಟಿಸಿ (BMTC) ಬಸ್‌ಗಳು ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ನಿಯಂತ್ರಣ ತಪ್ಪಿ ನಡೆದ ಈ ಭೀಕರ ಅಪಘಾತದ ರಭಸಕ್ಕೆ ಬಸ್‌ಗಳ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.
ಅಪಘಾತ ನಡೆದ ಸಂದರ್ಭದಲ್ಲಿ ಎರಡು ಬಸ್‌ಗಳಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಬಸ್‌ಗಳು ಒಂದಕ್ಕೊಂದು ಡಿಕ್ಕಿ ಹೊಡೆದ ರಭಸಕ್ಕೆ ಸೀಟುಗಳ ಮಧ್ಯೆ ಸಿಲುಕಿ ಗಾಯಗೊಂಡ ಹಲವು ಪ್ರಯಾಣಿಕರು ಹೊರಗೆ ಬರಲಾಗದೆ ಬಸ್ ಒಳಗಡೆಯೇ ಪರದಾಡುತ್ತಿದ್ದಾರೆ.
ಸಿಗ್ನಲ್‌ನಲ್ಲಿ ನಿಂತಿದ್ದ ಬಸ್‌ಗೆ ಮತ್ತೊಂದು ಬಸ್ ಡಿಕ್ಕಿ
ಎಂದಿನಂತೆ ರಸ್ತೆಯಲ್ಲಿ ಸಂಚಾರ ದಟ್ಟಣೆ ಆರಂಭವಾಗುತ್ತಿದ್ದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಜಂಕ್ಷನ್‌ನ ಸಿಗ್ನಲ್‌ನಲ್ಲಿ ಬಿಎಂಟಿಸಿಯ ‘ವಾಯು ವಜ್ರ’ (ವೋಲ್ವೋ) ಬಸ್ ನಿಂತಿತ್ತು. ಇದೇ ವೇಳೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಮತ್ತೊಂದು ಸಾಮಾನ್ಯ ಬಿಎಂಟಿಸಿ ಬಸ್, ಸಿಗ್ನಲ್‌ನಲ್ಲಿ ನಿಂತಿದ್ದ ವಾಯು ವಜ್ರ ಬಸ್‌ಗೆ ಹಿಂಭಾಗದಿಂದ ಅತ್ಯಂತ ಜೋರಾಗಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಸಾಮಾನ್ಯ ಬಿಎಂಟಿಸಿ ಬಸ್‌ನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.
ಘಟನೆ ನಡೆದ ತಕ್ಷಣವೇ ಎಚ್ಚೆತ್ತ ರಕ್ಷಣಾ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಬಸ್‌ನ ಚಾಲಕನನ್ನು (ಡ್ರೈವರ್) ರಕ್ಷಣೆ ಮಾಡಿ, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‌ನಲ್ಲಿದ್ದ ಯುವತಿಯೊಬ್ಬಳ ಕಾಲು ಸೀಟಿನ ಅಡಿಗೆ ಭೀಕರವಾಗಿ ಸಿಲುಕಿಕೊಂಡಿದ್ದ ಕಾರಣ ಆಕೆ ಹೊರಬರಲಾರದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆಕೆಯನ್ನು ಸುರಕ್ಷಿತವಾಗಿ ರಕ್ಷಿಸಿ ಬಸ್ಸಿನಿಂದ ಹೊರಗೆ ಇಳಿಸಿದ್ದಾರೆ.
ಬಸ್‌ನ ಕಿಟಕಿ ಮುರಿದು ಸಿಲುಕಿಕೊಂಡಿರುವ ಸಾರ್ವಜನಿಕರನ್ನು ಹಾಗೂ ಗಾಯಾಳುಗಳನ್ನು ಸುರಕ್ಷಿತವಾಗಿ ಹೊರತೆಗೆಯಲು ರಕ್ಷಣಾ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಇದನ್ನೂ ಓದಿ : ಬೆಂಗಳೂರಲ್ಲಿ ಹೊತ್ತಿ ಉರಿದ ಬಸ್, ನಾಲ್ವರು ಪ್ರಾಣಾಪಾಯದಿಂದ ಪಾರು-VIDEO
ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗಳಿಗೆ ರವಾನಿಸಲು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಬಿರುಸಿನಿಂದ ಸಾಗಿದೆ. ಈ ಭೀಕರ ಬಸ್ ಅಪಘಾತದ ಪರಿಣಾಮವಾಗಿ ಕೆ.ಆರ್. ಸರ್ಕಲ್ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಿಲೋಮೀಟರ್‌ಗಟ್ಟಲೆ ಭೀಕರ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಟ್ರಾಫಿಕ್ ಪೊಲೀಸರು ವಾಹನ ದಟ್ಟಣೆಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.
ಬಸ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ಮಹಿಳೆಗೆ ಗಂಭೀರ ಗಾಯವಾಗಿ ಕಾಲ ಸಿಕ್ಕಿ ಹಾಕಿಕೊಂಡಿತ್ತು. ಅವರನ್ನು ಬಸ್‌ನಿಂದ ಹೊರತೆಗೆಯಲು ಹರಸಾಹಸ ಪಡಲಾಯ್ತು. ಕಬ್ಬಿಣದ ಸಲಾಖೆಗಳನ್ನು ಹರ ಸಾಹಸಪಟ್ಟು ತುಂಡರಿಸಿ ಮಹಿಳೆಯನ್ನು ಹೊರ ತೆಗೆಯಲಾಯ್ತು.