Wednesday, February 19, 2025
Homeಕ್ರೈಂBREAKING NEWS : ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್, ಆದೇಶ ಕಾಯ್ದಿರಿಸಿದ ಹೈಕೋರ್ಟ್

BREAKING NEWS : ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್, ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು : ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ಮತ್ತು ಆನಂತರದ ನ್ಯಾಯಾಂಗ ಪ್ರಕ್ರಿಯೆ ರದ್ದತಿ ಕೋರಿ ಬಿಎಸ್​​​​​ವೈ  ಮತ್ತು ಇತರರು ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ.

ಈ ಹಿಂದಿನ ವಿಚಾರಣೆ ವೇಳೆ  ಸಿಐಡಿ ವಿಡಿಯೋ ದೃಶ್ಯಾವಳಿ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ವರದಿ ಮತ್ತಿತರ ಸಾಕ್ಷ್ಯಗಳನ್ನು ಕೋರ್ಟ್​​​​​ ಸಲ್ಲಿಸಿತು. ಯಡಿಯೂರಪ್ಪ ಅವರಿಗೆ ಜಾಮೀನು ಮಂಜೂರು ಮಾಡುವ ಮಧ್ಯಂತರ ಆದೇಶವನ್ನು ವಿಸ್ತರಿಸಿದ್ದ ಕೋರ್ಟ್​​​​ ವಿಚಾರಣಾ ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗುವುದರಿಂದ ವಿನಾಯಿತಿ ನೀಡಿ ಇಂದಿಗೆ (ಜ.17) ವಿಚಾರಣೆ ನಿಗದಿಪಡಿಸಿತ್ತು.

ಕಳೆದ ವರ್ಷ ಫೆಬ್ರವರಿಯಲ್ಲಿ ಯಡಿಯೂರಪ್ಪ ಅವರ ಬೆಂಗಳೂರಿನ ನಿವಾಸದಲ್ಲಿ 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿತ್ತು. ಈ ಆಪಾದನೆ ಮಾಡಿದ್ದ ಸಂತ್ರಸ್ತೆ ತಾಯಿ ಕಳೆದ ರ್ಷವೇ ಮೇ ನಲ್ಲಿ ಶ್ವಾಸಕೋಶ ಕ್ಯಾನ್ಸರ್​​ನಿಂದ ಮೃತಪಟ್ಟಿದ್ದರು.

ನಂತರ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಉಲ್ಲೇಖಿಸಿ ಸಂತ್ರಸ್ತೆಯ ಸಹೋದರ ಬಿಎಸ್​​​​ವೈ ಅವರನ್ನು ಬಂಧಿಸಿ ಹೆಚ್ಚಿನ ತನಿಖೆಗೆ ಕೋರಿ ಹೈಕೋರ್ಟ್​​​ಗೆ ಅರ್ಜಿ ಸಲ್ಲಿಸಿದ್ದರು. ಸದ್ಯ ಪೋಕ್ಸೋ ಪ್ರಕರಣ ರದ್ದತಿ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ.

ಹೆಚ್ಚಿನ ಸುದ್ದಿ

error: Content is protected !!