Wednesday, May 14, 2025
Homeಟಾಪ್ ನ್ಯೂಸ್BREAKING NEWS : ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿ, ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ

BREAKING NEWS : ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿ, ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರ ವರ್ಗಾವಣೆ ಕುರಿತಾಗಿ ಮಹತ್ವದ ಚರ್ಚೆ ನಡೆಯಿತು.

2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಗಳನ್ನು ಹೊರಡಿಸಲು ಮತ್ತು ಈಗಿರುವ ಮಾರ್ಗಸೂಚಿಯನ್ನು ಪರಿಷ್ಕರಿಸಲು ಹಾಗೂ ವರ್ಗಾವನೆ ಅವಧಿಯನ್ನು ವಿಸ್ತರಿಸಲು ಸಿಎಂ ಅವರಿಗೆ ಅಧಿಕಾರ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ.

ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇ.6ರಷ್ಟು ಮೀರದಂತೆ ದಿ.15-5-2025 ರಿಂದ 14-62025 ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್ ‘ಸಿ’ ಮತ್ತು ‘ಡಿ’ ವೃಂದದ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಲು ಸಂಪುಟದಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಕಾನೂನು ಮತ್ತು ಸಂಸ ದೀಯ ವ್ಯವಹಾರಗಳ ಸಚಿವ ಹೆಚ್​ಕೆ ಪಾಟೀಲ್ ಅವರು ತಿಳಿಸಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!