ತುಮಕೂರು : ಹಾಸ್ಟೆಲ್ನಲ್ಲಿ ಮಧ್ಯಾಹ್ನದ ಊಟ ಸೇವಿಸಿದ ಸುಮಾರು 40ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಶಿರಾದಲ್ಲಿ ಇಂದು ನಡೆದಿದೆ.
ಶಿರಾ ತಾಲೂಕಿನ ಖಾಸಗಿ ವಸತಿ ಶಾಲೆಯಲ್ಲಿ ಈ ಘಟನೆ ಸಂಭವಿಸಿದ್ದು, ವಿದ್ಯಾರ್ಥಿಗಳಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ. ಪ್ರೆಸಿಡೆನ್ಸಿ ಖಾಸಗಿ ವಸತಿ ಶಾಲೆಯ ವಿದ್ಯಾರ್ಥಿಗಳು ಊಟ ಸೇವಿಸಿದ ನಂತರದಲ್ಲಿ ಕೆಲವರಿಗೆ ತಲೆ ಸುತ್ತು, ವಾಂತಿಯಾಗಿದೆ ಎಂದು ಹೇಳಲಾಗುತ್ತಿದೆ.
ಕಳಪೆ ಗುಣಮಟ್ಟದ ಆಹಾರ ಸೇವಿಸಿದ್ದಕ್ಕೇ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು ಎಂಬ ಆರೋಪ ಕೇಳಿ ಬಂದಿದ್ದು, ಅವರನ್ನು ಕೂಡಲೇ ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಆರೋಗ್ಯ ಸದ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.