Wednesday, December 4, 2024
Homeಕ್ರೈಂBREAKING NEWS : ಲೈಂಗಿಕ ದೌರ್ಜನ್ಯ ಕೇಸ್ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಕದ ತಟ್ಟಿದ...

BREAKING NEWS : ಲೈಂಗಿಕ ದೌರ್ಜನ್ಯ ಕೇಸ್ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಕದ ತಟ್ಟಿದ ಪ್ರಜ್ವಲ್ ರೇವಣ್ಣ

ನವದೆಹಲಿ : ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಹಾಸನ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ

ಜಾಮೀನು ನಿರಾಕರಿಸಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಪ್ರಜ್ವಲ್‌ ರೇವಣ್ಣ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಸೋಮವಾರ (ನ. 11) ಸುಪ್ರೀಂ ಕೋರ್ಟ್‌ ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.

ಕಳೆದ ಅಕ್ಟೋಬರ್‌ 21ರಂದು ಪ್ರಜ್ವಲ್‌ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿತ್ತು. ಪ್ರಜ್ವಲ್‌ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು

 

ಹೆಚ್ಚಿನ ಸುದ್ದಿ

error: Content is protected !!