Sunday, January 25, 2026
Homeಟಾಪ್ ನ್ಯೂಸ್BREAKING NEWS: 2 ದಿನಗಳ ವಿಶೇಷ ಅಧಿವೇಶನ ಕರೆಯಲು ನಿರ್ಧರಿಸಿದ ರಾಜ್ಯ ಸರ್ಕಾರ

BREAKING NEWS: 2 ದಿನಗಳ ವಿಶೇಷ ಅಧಿವೇಶನ ಕರೆಯಲು ನಿರ್ಧರಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಕೇಂದ್ರ ಸರ್ಕಾರವು ಇತ್ತೀಚೆಗೆ ನರೇಗಾ ಯೋಜನೆಯ (Scheme) ಹೆಸರನ್ನು ಬದಲಾವಣೆ ಮಾಡಿರುವ ವಿಚಾರವಾಗಿ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದ ರಾಜ್ಯ ಸರ್ಕಾರ (Karnataka Government) ಎರಡು ದಿನಗಳ ವಿಶೇಷ ಅಧಿವೇಶನವನ್ನು ಕರೆಯಲು ಇದೀಗ ಸಜ್ಜಾಗಿದೆ.

ನಗರದ ಖಾಸಗಿ ಹೋಟೆಲ್​​​​ನಲ್ಲಿ ಇಂದು (ಜ.8) ನಡೆದ ಶಾಸಕರ ಸಭೆಯಲ್ಲಿ ಈ ಕುರಿತು ಮಾತನಾಡಿರುವ ಸಿಎಂ, ಮಹಾತ್ಮ‌ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು ಎಂದರು.

‘ಉದ್ಯೋಗದ ಹಕ್ಕು ಇಲ್ಲವಾಗಿಸಿದೆ’

ಇದು ಬಿಜೆಪಿಯವರ ಹುನ್ನಾರವಾಗಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ಜಾರಿಗೆ ಬಂತು. ಈ ಯೋಜನೆ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವ ಯೋಜನೆ. ದಲಿತರು, ಮಹಿಳೆಯರು, ರೈತರಿಗೆ ಉದ್ಯೋಗ ಒದಗಿಸುವುದು ಯೋಜನೆ ಉದ್ದೇಶ. ವರ್ಷದಲ್ಲಿ ನೂರು ದಿನ ಉದ್ಯೋಗ ಅವಕಾಶ ಈ ಯೋಜನೆಯಲ್ಲಿ ಸಿಗುತ್ತಿತ್ತು. ಈ ಉದ್ಯೋಗವನ್ನೇ ಕಸಿಯುವ ಕೆಲಸಕ್ಕೆ ಕೇಂದ್ರ ಸರ್ಕಾರ ಕೈ ಹಾಕಿದೆ. ಉದ್ಯೋಗದ ಹಕ್ಕು ಇಲ್ಲವಾಗಿಸಿದೆ ಎಂದು ಸಿಎಂ ಆರೋಪಿಸಿದರು.

‘ಗೊಂದಲ ಸೃಷ್ಟಿ ಮಾಡುವ ಹುನ್ನಾರ ಇದಾಗಿದೆ’

ಮಹಾತ್ಮ ಗಾಂಧಿಯವರ ಹೆಸರು ತೆಗೆದು ಗೊಂದಲ ಸೃಷ್ಟಿ ಮಾಡುವ ಹುನ್ನಾರ ಇದಾಗಿದೆ. ಈ ಮೂಲಕ ಮತ್ತೆ ಗಾಂಧಿಯವರನ್ನು ಕೊಲೆ ಮಾಡಲಾಗಿದೆ. ಇದು ಸಂಘ ಪರಿವಾರದವರು ಹೇಳಿ ಕೊಟ್ಟಿರುವ ಪಾಠ. 28 ಕೋಟಿ ದಲಿತರಿಗೆ ಇದರಿಂದ ಅನ್ಯಾಯವಾಗಿದೆ. ನಮ್ಮ ಹೋರಾಟ ತೀವ್ರವಾಗಿ ಇರಬೇಕು. ಬಡವರ ಉದ್ಯೋಗದ ಹಕ್ಕು ಕಸಿದುಕೊಂಡವರಿಗೆ ಪಾಠ ಕಲಿಸಬೇಕು. ಬಡವರು ಆರ್ಥಿಕವಾಗಿ ಸಬಲರಾಗುವುದನ್ನು ಸಂಘ ಪರಿವಾರ ಸಹಿಸುವುದಿಲ್ಲ ಎಂದು ಪ್ರತಿಪಾದಿಸಿದರು.

ಮನ್ರೆಗಾ ಕಾಯಿದೆ ಮತ್ತೆ ಜಾರಿ ಅಗುವ ರೀತಿ ಜನಾಂದೋಲನ ನಡೆಯಬೇಕು. ಪ್ರತಿ ಗ್ರಾಮ ಪಂಚಾಯಿತಿ ಸದಸ್ಯ ನರೇಗಾದಲ್ಲಿ ಕೆಲಸ ಮಾಡುತ್ತಿರುವವರನ್ನ ತಲುಪಬೇಕು. ಈ ವಿಷಯದ ಬಗ್ಗೆ ಜನರನ್ನೂ ಜಾಗೃತಗೊಳಿಸುವ ಕೆಲಸವನ್ನು ಶಾಸಕರು ಮಾಡಬೇಕು. ನಮ್ಮ ಹೋರಾಟ ಜನಾಂದೋಲನವಾಗಿ ರೂಪುಗೊಳ್ಳುವಂತಹ ವಾತಾವರಣ ನಿರ್ಮಾಣ ಆಗಬೇಕಿದೆ. ಕಾಂಗ್ರೆಸ್ ಜಾರಿಗೆ ತಂದ ಕಾರ್ಯಕ್ರಮವನ್ನು ರದ್ದು ಮಾಡಿ ಉದ್ಯೋಗದ ಹಕ್ಕು ಕಸಿದುಕೊಂಡಿರುವುದು ಸಂವಿಧಾನ ಬಾಹಿರ ಕೆಲಸ ಎಂದು ಸಿಎಂ ಸಭೆಯಲ್ಲಿ ಹೇಳಿದರು.

ಇದನ್ನೂ ಓದಿ: ‘ವಿಬಿಜಿ, ರಾಮ್ ಜಿ’ ಯೋಜನೆ… ಕಾನೂನಾತ್ಮಕ ಕ್ರಮಕ್ಕೆ ಸಚಿವ ಸಂಪುಟ ತೀರ್ಮಾನ

ಹೆಚ್ಚಿನ ಸುದ್ದಿ

Change Language »
While viewing the website, tap in the menu bar. Scroll down the list of options, then tap Add to Home Screen.
Use Safari for a better experience.
error: Content is protected !!