Sunday, July 7, 2024
Homeಟಾಪ್ ನ್ಯೂಸ್Job Alert: BSFನಲ್ಲಿ ಉದ್ಯೋಗಾವಕಾಶ; ಹೆಡ್​ ಕಾನ್ಸ್​​ಟೇಬಲ್​, ಸಹಾಯಕ ಸಬ್​ ಇನ್ಸ್​​ಪೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನ

Job Alert: BSFನಲ್ಲಿ ಉದ್ಯೋಗಾವಕಾಶ; ಹೆಡ್​ ಕಾನ್ಸ್​​ಟೇಬಲ್​, ಸಹಾಯಕ ಸಬ್​ ಇನ್ಸ್​​ಪೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಗಡಿ ಭದ್ರತಾ ಪಡೆಯಲ್ಲಿನ ಸಹಾಯಕ ಸಬ್​ ಇನ್ಸ್​​ಪೆಕ್ಟರ್​ (ಮಿನಿಸ್ಟ್ರಿಯಲ್​) ಮತ್ತು ಹೆಡ್​ ಕಾನ್ಸ್​ಟೇಬಲ್ (ಕ್ಲರ್ಕ್​)​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1526 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ..

ಹುದ್ದೆ ವಿವರ: ಒಟ್ಟು 1526 ಹುದ್ದೆಗಳ ನೇಮಕಾತಿ

ಸಹಾಯಕ ಸಬ್​ ಇನ್ಸ್​ಪೆಕ್ಟರ್​ ಮತ್ತು ವಾರೆಂಟ್​ ಆಫೀಸರ್​ 243

ಹೆಡ್​​ ಕನ್ಸ್​ಟೇಬಲ್​​ ಮತ್ತು ಹವೀಲ್ದಾರ್​ (ಕ್ಲರ್ಕ್​) – 1283

ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ ಪೂರ್ಣಗೊಳಿಸಿರಬೇಕು. ಕ್ಲರ್ಕ್​ ಹುದ್ದೆಗಳ ನೇಮಕಾತಿ ಹಿನ್ನೆಲೆ ಅಭ್ಯರ್ಥಿಗಳು ಟೈಪಿಂಗ್​ ಅನುಭವ ಹೊಂದಿರಬೇಕು.

ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ ವಯೋಮಿತಿ ಇರಬೇಕು.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ದೈಹಿಕ ದಾರ್ಢ್ಯತೆ, ಕೌಶಲ್ಯ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಜೂನ್​ 9ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 8 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು rectt.bsf.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಹೆಚ್ಚಿನ ಸುದ್ದಿ