ಚನ್ನಪಟ್ಟಣದ : ಕೇವಲ ಎರಡು ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದ ಮಾತ್ರಕ್ಕೆ ಕುಮಾರಸ್ವಾಮಿಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ನೀಡಿರುವ ಬಿಜೆಪಿಯವರು ನಿಜವಾಗಲೂ ದಡ್ಡರೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದರು.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎಲೆ ತೋಟದ ಹಳ್ಳಿ, ಅಕ್ಕೂರಿನಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿ, 18 ಸೀಟು ಇಟ್ಟುಕೊಂಡು ಸರ್ಕಾರ ಮಾಡಲು ಸಾಧ್ಯವೇ? ಬಿಜೆಪಿಯವರು ದಡ್ಡರು, ಕೇವಲ ಎರಡು ಕ್ಷೇತ್ರ ಗೆದ್ದಿರುವುದಕ್ಕೆ ಕೇಂದ್ರದಲ್ಲಿ ಮಂತ್ರಿ ಮಾಡಿದ್ದಾರೆ. ನಾವಾಗಿದ್ದರೆ ಅವರನ್ನು ಹತ್ತಿರಕ್ಕೂ ಸೇರಿಸುತ್ತಿರಲಿಲ್ಲ. ಈ ಹಿಂದೆ ಅವರ ಸಹವಾಸ ಮಾಡಿ ಅನುಭವಿಸಿದ್ದು ಸಾಕಾಗಿದೆ ಎಂದು ಮಾತಿನಲ್ಲೇ ಡಿಕೆಶಿ ಗುಮ್ಮಿದರು.
ಇನ್ನು ನಮ್ಮ ಅಭ್ಯರ್ಥಿ ಯೋಗೇಶ್ವರ್ ಒಬ್ಬರೇ ಈ ಕ್ಷೇತ್ರದ ಜನರ ಸೇವೆ ಮಾಡಲ್ಲ. ನಾನು ಸೇರಿದಂತೆ, ಸಿಎಂ ಸಿದ್ದರಾಮಯ್ಯ ಅವರಾದಿಯಾಗಿ ಎಲ್ಲಾ ಸಚಿವರು ಸೇವೆ ಮಾಡುತ್ತೇವೆ. ಕುಮಾರಸ್ವಾಮಿ ದುಡ್ಡು ಕೊಡುತ್ತಾರಂತೆ. ಅವರ ದುಡ್ಡನ್ನು ನೀವು ಬೇಡ ಎನ್ನಬೇಡಿ. ಅವರ ಬಳಿ ಹಣ ಪಡೆಯಿರಿ, ಮತವನ್ನು ಹಸ್ತದ ಗುರುತಿಗೆ ಹಾಕಿ. ಕೈ ಗುರುತಿಗೆ ನಿಮ್ಮ ಬೆಂಬಲ ನೀಡಿ ಎಂದು ಕರೆ ನೀಡಿದರು.