Thursday, April 16, 2026
Homeಟಾಪ್ ನ್ಯೂಸ್BY VIJAYENDRA: ಬಿಜೆಪಿ ಕೋರ್ ಕಮಿಟಿ ಸಭೆ, ಬೈ ಎಲೆಕ್ಷನ್​​​​ಗೆ ಅಭ್ಯರ್ಥಿಗಳ ಆಯ್ಕೆ ಬಹುತೇಕ ಅಂತಿಮ...

BY VIJAYENDRA: ಬಿಜೆಪಿ ಕೋರ್ ಕಮಿಟಿ ಸಭೆ, ಬೈ ಎಲೆಕ್ಷನ್​​​​ಗೆ ಅಭ್ಯರ್ಥಿಗಳ ಆಯ್ಕೆ ಬಹುತೇಕ ಅಂತಿಮ ಎಂದ ವಿಜಯೇಂದ್ರ

ಬೆಂಗಳೂರು: ಬಾಗಲಕೋಟೆ (Bagalakote) ಮತ್ತು ದಾವಣಗೆರೆ (Davanagere) ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಕುರಿತು ಬಿಜೆಪಿ ಕೋರ್ ಕಮಿಟಿಯಲ್ಲಿ (Bjp core committee) ಸಮಗ್ರ ಚರ್ಚೆ ನಡೆದಿದ್ದು, ಆಕಾಂಕ್ಷಿಗಳ ಹೆಸರುಗಳನ್ನು ಪಕ್ಷದ ಹಿರಿಯ ನಾಯಕರಿಗೆ ಕಳುಹಿಸಲಾಗುವುದು ಎಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ತಿಳಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಕರ್ನಾಟಕ ರಾಜ್ಯ ಉಸ್ತುವಾರಿ ಡಾ. ರಾಧಾಮೋಹನ್ ದಾಸ್ ಅಗ್ರವಾಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿರೋಧ ಪಕ್ಷದ ನಾಯಕರು ಹಾಗೂ ಕೋರ್ ಕಮಿಟಿಯ ಎಲ್ಲಾ ಸದಸ್ಯರು ಭಾಗವಹಿಸಿದ್ದರೆಂದು ವಿವರಿಸಿದ್ದಾರೆ.

ಇದನ್ನೂ ಓದಿ : ನೀವು ಸಿಎಂ ಆಗೋದು ನಮ್ಮ ಅಪೇಕ್ಷೆ ಎಂದ ಬಿಜೆಪಿ ಶಾಸಕ, ಅರ್ಚನೆ ಮಾಡಿ ಎಂದ ಡಿಕೆಶಿ!

ರಾಜ್ಯದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಘೋಷಿಸಿದ ಅಭ್ಯರ್ಥಿಗಳನ್ನು ಗೆಲ್ಲಿಸಲು ಪಕ್ಷದ ಎಲ್ಲರು ಒಗ್ಗಟ್ಟಿನಿಂದ ಶ್ರಮಿಸಬೇಕೆಂಬ ನಿರ್ಧಾರ ಕೈಗೊಳ್ಳಲಾಗಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಆಕಾಂಕ್ಷಿಗಳೊಂದಿಗೆ ಸಭೆ ನಡೆಸಿ, ಹಳೆಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಚುನಾವಣೆಯಲ್ಲಿ ಗೆಲುವಿಗಾಗಿ ಒಂದಾಗಿ ಕೆಲಸ ಮಾಡುವಂತೆ ಸೂಚಿಸಲಾಗಿದೆ ಎಂದಿದ್ದಾರೆ.

ಈ ಸಭೆಯಲ್ಲಿ ಚರ್ಚೆಯಾದ ಹೆಸರುಗಳನ್ನು ಇಂದು ಅಥವಾ ನಾಳೆ ದೆಹಲಿಗೆ ಕಳುಹಿಸಲಾಗುತ್ತದೆ. ಅಸಮಾಧಾನಗೊಂಡವರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ ಸಮಸ್ಯೆಗಳನ್ನು ಸರಿಪಡಿಸಲು ಪ್ರಯತ್ನಿಸಲಾಗಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಹೆಚ್ಚಿನ ಸುದ್ದಿ

Change Language »
error: Content is protected !!