Thursday, March 12, 2026
Homeಟಾಪ್ ನ್ಯೂಸ್CABINET MEETING : ವೈದ್ಯರ ವಯೋನಿವೃತ್ತಿ ಅವಧಿ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ

CABINET MEETING : ವೈದ್ಯರ ವಯೋನಿವೃತ್ತಿ ಅವಧಿ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರ ಕುರಿತು ಮಹತ್ವ ನಿರ್ಣಯ ಕೈಗೊಂಡಿದೆ.

ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ಸೂಪರ್ ಸ್ಪೆಷಾಲಿಟಿ ವೈದ್ಯರ ವಯೋನಿವೃತ್ತಿ ವಯಸ್ಸನ್ನು 60 ರಿಂದ 65 ಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದ್ದಾರೆ.

ಇ.ಎಸ್.ಐ. ವೃಂದ ನೇಮಕಾತಿಗಳ ಅನುಮೋದನೆ:

ಇದಲ್ಲದೇ, ಕರ್ನಾಟಕ ಕಾರ್ಮಿಕ ರಾಜ್ಯ ವಿಮಾ ಯೋಜನೆ (ವೈದ್ಯಕೀಯ) ಸೇವೆಗಳ (ನೇಮಕಾತಿ) ನಿಯಮಗಳು  2025 ಅನ್ನು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಿ ಭಾದಿತರಾಗಬಹುದಾದಂತಹ ವ್ಯಕ್ತಿಗಳಿಂದ ಸಲಹೆ/ ಆಕ್ಷೇಪಣೆಗಳನ್ನು ಆಹ್ವಾನಿಸಲು ಸಂಪುಟ ನಿರ್ಧರಿಸಿದೆ.

ಹೆಚ್ಚಿನ ಸುದ್ದಿ

Change Language »
error: Content is protected !!