ಹಾಸನ: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್‌ಗೆ ಸಂಕಷ್ಟ ಎದುರಾಗಿದೆ. ನಲಪಾಡ್ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಕಡೂರು ಜೆಎಂ ಎಫ್ ಸಿ ನ್ಯಾಯಾಲಯ ಸೂಚನೆ ನೀಡಿದೆ.
ಬೆಂಗಳೂರಲ್ಲಿ ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ನಡೆದ ಪ್ರತಿಭಟನೆ ವೇಳೆಯ ಭಾಷಣದ ಮೊಹಮ್ಮದ್ ನಲಪಾಡ್ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಪ್ರದೀಪ್ ನಾಯಕ್ ಹಾಸನದ ಸಖರಾಯಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.