ಮಡಿಕೇರಿ: ಬೆಂಗಳೂರಿನಲ್ಲಿ ಕಾವೇರಿ ಆರತಿ ಪ್ರಯುಕ್ತ ನಾಳೆ (ಶುಕ್ರವಾರ) ಡಿಸಿಎಂ ಡಿಕೆ ಶಿವಕುಮಾರ್ ಅವರು ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರದ ಸ್ಯಾಂಕಿ ಟ್ಯಾಂಕ್ ಕೆರೆಯಲ್ಲಿ ಕಾವೇರಿ ಆರತಿ ಮಾಡುವ ಕಾರ್ಯಕ್ರಮ ಆಯೋಜಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿಯವರು ಕಾವೇರಿ ಉಗಮಸ್ಥಾನ ತಲಕಾವೇರಿಗೆ ಬೆಳಗ್ಗೆ 8 ಗಂಟೆಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ತೀರ್ಥವನ್ನು ನೇರವಾಗಿ ಬೆಂಗಳೂರಿಗೆ ತೆಗೆದುಕೊಂಡು ಹೋಗಿ ಕಾವೇರಿಗೆ ಆರತಿ ಮಾಡಲಿದ್ದಾರೆ.
ಬೆಳಗ್ಗೆ ನೇರವಾಗಿ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ತಲಕಾವೇರಿಗೆ ಆಗಮಿಸಲಿದ್ದಾರೆ. ಈ ವೇಳೆ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರ ಎ.ಎಸ್ ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿರಲಿದ್ದಾರೆ.