ಬೆಂಗಳೂರು : ರಾಜ್ಯದ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇಗುಲ ಅಭಿವೃದ್ಧಿಗೆ ಕೇಂದ್ರ ಸರ್ಕಾರ 100 ಕೋಟಿ ರೂ ಮಂಜೂರು ಮಾಡಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಬಳಿ ಸಚಿವ ಎಚ್.ಕೆ.ಪಾಟೀಲ ಮನವಿ ಮಾಡಿಕೊಂಡಿದ್ದರು. ಈ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ ನೂರು ಕೋಟಿ ರೂ. ಬಿಡುಗಡೆ ಮಾಡಿದೆ.
ಈ ವರ್ಷದಲ್ಲಿ ಸವದತ್ತಿ ಯಲ್ಲಮ್ಮ ಧಾರ್ಮಿಕ ಕೇಂದ್ರಕ್ಕೆ ಸುಮಾರು ಒಂದು ಕೋಟಿಗೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಜೊತೆಗೆ ಭಕ್ತರು ಭೇಟಿ ನೀಡಿದ್ದಾರೆ. ಹೀಗಾಗಿ ಪ್ರವಾಸಿಗರಿಗೆ ಅಗತ್ಯ ವಸತಿ ಸೌಲಭ್ಯ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸುವ ಸಲುವಾಗಿ ನೂರು ಕೋಟಿ ರೂ.ಗಳ ಅಗತ್ಯವಿದೆ ಎಂದು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿದ್ದರು.
ಸಚಿವ ಹೆಚ್.ಕೆ.ಪಾಟೀಲರ ಈ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ ಸವದತ್ತಿ ದೇಗುಲ ಅಭಿವೃದ್ಧಿಗೆ 100 ಕೋಟಿ ರೂ. ಅನುಮೋದಿಸಿದೆ.