Tuesday, December 3, 2024
Homeಟಾಪ್ ನ್ಯೂಸ್ಕೇಂದ್ರ ಸಂಸದೀಯ ಸಭೆ: ದೆಹಲಿಗೆ ಸಿಎಂ ಬೊಮ್ಮಾಯಿ

ಕೇಂದ್ರ ಸಂಸದೀಯ ಸಭೆ: ದೆಹಲಿಗೆ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಇಂದು ಮತ್ತು ನಾಳೆ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ಹಾಗಾಗಿ ದೆಹಲಿಗೆ ಹೊರಟಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಇಂದು ಮತ್ತು ನಾಳೆ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ಹಾಗಾಗಿ ದೆಹಲಿಗೆ ಹೊರಟಿದ್ದೇನೆ. ಇಗಾಗಲೇ ಕ್ಷೇತ್ರ, ಜಿಲ್ಲಾ ಮಟ್ಟದಲ್ಲಿ ಅಭಿಪ್ರಾಯ ಸಂಗ್ರಹವಾಗಿದೆ. ಒಂದು ಕ್ಷೇತ್ರಕ್ಕೆ ಮೂರು ಜನರ ಹೆಸರು ಶಾರ್ಟ್ ಲಿಸ್ಟ್ ಮಾಡಲಾಗಿದೆ. ಅಂತಿಮವಾಗಿ ಸಂಸದೀಯ ಮಂಡಳಿ ಸಭೆಯಲ್ಲಿ ಎಲ್ಲವೂ ತೀರ್ಮಾನವಾಗಲಿದೆ ಎಂದು ಹೇಳಿದ್ದಾರೆ.

ನಾಗರಾಜ್ ಛಬ್ಬಿ ಇದುವರೆಗೆ ನನ್ನ ಸಂಪರ್ಕ ಮಾಡಿಲ್ಲ, ಆಣೆ ಪ್ರಮಾಣ ಹೊಸದೇನಲ್ಲ. ಆಯಾ ಕ್ಷೇತ್ರದ ಹಂತದಲ್ಲಿ ಆಣೆ ಪ್ರಮಾಣ ನಡೆಯತ್ತೆ, ಅದರ ಬಗ್ಗೆ ವಿಶ್ಲೇಷಣೆ ಮಾಡಲ್. ಮಾಜಿ ಸಿಎಂ ಸಿದ‍್ಧರಾಮಯ್ಯ ವಿರುದ್ಧ ಸಚಿವ ಸೋಮಣ್ಣ ಸ್ಪರ್ಧೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ನಾಳೆ ವರುಣಾ ಕ್ಷೇತ್ರದ ಬಗ್ಗೆಯೂ ಚರ್ಚೆಯಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!