Sunday, July 7, 2024
Homeಟಾಪ್ ನ್ಯೂಸ್JOB ALERT: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆ...

JOB ALERT: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆ ದಿನ

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 1 ಪ್ರಾಜೆಕ್ಟ್​ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಮೇ 29, 2024 ಅಂದರೆ ನಾಳೆ ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಶೈಕ್ಷಣಿಕ ಅರ್ಹತೆ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್​, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 25,000

ಉದ್ಯೋಗದ ಸ್ಥಳ:
ಮೈಸೂರು

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

ಇನ್ನು ಈ ಹುದ್ದೆಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆ ದಿನವಾಗಿದ್ದು, ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್​ಸೈಟ್​cftri.res.in ಭೇಟಿ ಕೊಡಿ.

ಹೆಚ್ಚಿನ ಸುದ್ದಿ