Sunday, July 7, 2024
Homeಟಾಪ್ ನ್ಯೂಸ್JOB ALERT: ಸಿಜಿಹೆಚ್‌ಎಸ್‌ ನಿಂದ ನೇಮಕ ಅಧಿಸೂಚನೆ; ಅರ್ಜಿ ಸಲ್ಲಿಸಲು ಜೂ.20 ಕೊನೆಯ ದಿನ

JOB ALERT: ಸಿಜಿಹೆಚ್‌ಎಸ್‌ ನಿಂದ ನೇಮಕ ಅಧಿಸೂಚನೆ; ಅರ್ಜಿ ಸಲ್ಲಿಸಲು ಜೂ.20 ಕೊನೆಯ ದಿನ

2024: ಕೇಂದ್ರ ಸರ್ಕಾರ ಆರೋಗ್ಯ ಯೋಜನೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಕೌಂಟೆಂಟ್​ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜೂನ್ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ಪೋಸ್ಟ್​ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ವಯೋಮಿತಿ:
ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 64 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:
ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್​ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಹೆಚ್ಚುವರಿ ನಿರ್ದೇಶಕರು
CGHS
3 ನೇ ಮಹಡಿ
‘ಇ’ ವಿಭಾಗ
ಕೇಂದ್ರೀಯ ಸದನ್
ಕೋರಮಂಗಲ
ಬೆಂಗಳೂರು-560034

ಹೆಚ್ಚಿನ ಸುದ್ದಿ