ಚನ್ನಪಟ್ಟಣ : ರಾಜ್ಯದ ಮೂರು ಕ್ಷೇತಗಳ ಬೈ ಎಲೆಕ್ಷನ್ ನಡೀತಾಯಿದೆ. ಈಗಾಗಲೇ ಬಿರುಸಿನ ಮತದಾನ ನಡೆಯುತ್ತಿದ್ದು, ಎಲ್ಲಾಕಡೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ.
ಬೊಂಬೆನಾಡು ಚನ್ನಪಟ್ಟಣದಲ್ಲಿ ನಿಖಿಲ್ ಹಾಗೂ ಸಿಪಿವೈ ನಡುವೆ ಜಿದ್ದಾಜಿದ್ದಿನ ಸ್ಪರ್ಧೆಯಿದ್ದು , ಮತದಾನಕ್ಕೂ ಮುನ್ನ ನಿಖಿಲ್ ದೇವರ ಮೊರೆ ಹೋಗಿದ್ದಾರೆ.
ಚನ್ನಪಟ್ಟಣ ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತದಾನಕ್ಕೂ ಮುನ್ನ ಕ್ಷೇತ್ರದ ಪ್ರಸಿದ್ದ ಶ್ರೀ ಕೆಂಗಲ್ ಆಂಜನೇಯ ಸ್ವಾಮಿಯ ಸನ್ನಿಧಿಗೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕ್ಷೇತ್ರದಲ್ಲಿ ಸಂಚಾರ ನಡೆಸ್ತಿದ್ದಾರೆ.
ಮತ್ತೊಂದೆಡೆ ಶಿಗ್ಗಾವಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಕೂಡ ಮತದಾನಕ್ಕೆ ಮುನ್ನ ಜೈನ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಿಂದ ಯಾಸೀರ್ ಪಠಾಣ್ ಎದುರಾಳಿಯಾಗಿದ್ದು ,ತೀವ್ರ ಸ್ಪರ್ಧೆ ಒಡ್ಡಿದ್ದಾರೆ.