ಹಿಂದೂ ಧರ್ಮದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ ಆರೋಪದ ಮೇಲೆ ಬಂಧಿತನಾಗಿದ್ದ ನಟ ಚೇತನ್ ಅಹಿಂಸಾಗೆ ಬೆಂಗಳೂರಿನ 32ನೇ ಎಸಿಎಂಎಂ ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ.
ಹಿಂದುತ್ವದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕುತ್ತಿದ್ದಾರೆಂದು ಆರೋಪಿಸಿ ಶಿವಕುಮಾರ್ ಎಂಬುವವರು ನೀಡಿದ್ದ ದೂರಿನ ಆಧಾರದ ಮೇರೆಗೆ ಶೇಷಾದ್ರಿಪುರಂ ಠಾಣೆಯ ಪೊಲೀಸರು ಸೋಮವಾರ ರಾತ್ರಿ ಬಂಧನಕ್ಕೊಳಪಡಿಸಿದ್ದರು. ಶೇಷಾದ್ರಿಪುರಂ ಠಾಣೆಯ ಪೊಲೀಸರು ಕಲಂ 295ಎ ಮತ್ತು 505ಬಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಚೇತನ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಲಾಗಿತ್ತು.
ಈಗ 25 ಸಾವಿರ ರೂ. ಗಳ ವೈಯಕ್ತಿಕ ಬಾಂಡ್ ಅಥವಾ ವೈಯಕ್ತಿಕ ಭದ್ರತೆ ಆಧಾರದ ಮೇರೆಗೆ ಚೇತನ್‍ರಿಗೆ ಜಾಮೀನು ಮಂಜೂರು ಮಾಡಲಾಗಿದೆ. ನಟ ಚೇತನ್ ಪರ ವಕೀಲ ಸುನೀಲ್ ಕುಮಾರ್ ಗುನ್ನಾಪುರ ವಾದ ಮಂಡಿಸಿದ್ದರು.