ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮೊದಲ ಬಾರಿಗೆ 80 ವರ್ಷಕ್ಕೂ ಹೆಚ್ಚಿನ ವಯಸ್ಸಿನ ಹಾಗೂ ವಿಶೇಷ ಚೇತನರಿಗೆ ಮೊದಲ ಬಾರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ. ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ರು. ಮತದಾನ ಕೇಂದ್ರಗಳಲ್ಲಿ ಇವರಿಗೆ ವಿಶೇಷ ಸೌಲಭ್ಯಗಳನ್ನು ಮಾಡಲಾಗಿದೆ. ಆದರೂ, ಮತದಾನ ಕೇಂದ್ರಕ್ಕೆ ಆಗಮಿಸಲು ಸಾಧ್ಯವಾಗದೇ ಇರುವಂತಹ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ವಿಶೇಷ ಸೌಲಭ್ಯವನ್ನು ಕಲ್ಪಿಸಲಾಗಿದೆ. ಎಲ್ಲಾ ರೀತಿಯ ಮುನ್ನೆಚ್ಚರಿಕೆಯನ್ನು ತಗೆದುಕೊಂಡು ಪಾರದರ್ಶಕವಾದ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.
ವಿಶೇಷ ಚೇತನ ಮತದಾರರಿಗೆ ಮತಗಟ್ಟೆಗಳಲ್ಲಿ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಮನೆಯಿಂದ ಮತಗಟ್ಟೆಗೆ ಪಿಕ್ ಅಂಡ್ ಡ್ರಾಪ್, ಸಕ್ಷಮ್ ಆಪ್ ಮೂಲಕ ತಮಗೆ ಬೇಕಾದ ಸೌಲಭ್ಯಗಳ ಬಗ್ಗೆ ಮೊದಲೇ ನೊಂದಾಯಿಸಿಕೊಳ್ಳುವ ಅವಕಾಶ. ವ್ಹೀಲ್ ಚೇರ್, ಪ್ರಿಯಾರಿಟಿ ವೋಟಿಂಗ್, ದೃಷ್ಟಿ ದೋಷದ ಮತದಾರರಿಗೆ ಬ್ರೈಲ್ ಬ್ಯಾಲಟ್ ಪೇಪರ್ ನಂತಹ ಹಲವಾರು ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದ್ರು.