ರಾಮನವಮಿ ಮೆರವಣಿಗೆಯ ವೇಳೆ ಬಿಹಾರದ ರೋಹ್ತಾಸ್ ಮತ್ತು ನಳಂದಾ ಜಿಲ್ಲೆಗಳಲ್ಲಿ ಕೋಮು ಸಂಘರ್ಷ ತೀವ್ರ ಸ್ವರೂಪಕ್ಕೆ ತಲುಪಿದೆ. ಶನಿವಾರ ಸಂಜೆ ಸ್ಫೋಟ ನಡೆದಿದ್ದು, ಮತ್ತೊಮ್ಮೆ ಹಿಂಸಾಚಾರ ಭುಗಿಲೆದ್ದಿವೆ.
ಶುಕ್ರವಾರ ರಾಮನವಮಿ ಮೆರವಣಿಗೆ ವೇಳೆ ಹಿಂದೂ-ಮುಸ್ಲಿಮರ ಗುಂಪುಗಳ ನಡುವಿನ ಘರ್ಷಣೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ 13 ಜನರು ಗಾಯಗೊಂಡಿದ್ದರು, ಮೂವರಿಗೆ ಗುಂಡೇಟು ತಗುಲಿತ್ತು.
ಶನಿವಾರ ನಡೆದ ಘರ್ಷನೆಯಲ್ಲಿ ಒಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರೆ. ರೋಹ್ತಾಸ್ ಜಿಲ್ಲೆಯ ಸಸಾರಾಮ್ ಪಟ್ಟಣದಲ್ಲಿ ನಡೆದ ಸ್ಫೋಟದಲ್ಲಿ ಆರು ಜನರು ಗಾಯಗೊಂಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಹಿಂಸಾಚಾರದ ಹಿನ್ನೆಲೆಯಲ್ಲಿ ಸಸಾರಾಮ್‌ನಲ್ಲಿ ಶನಿವಾರ ಪೊಲೀಸ್ ತಂಡ, ವಿಶೇಷ ಕಾರ್ಯ ಪಡೆ (ಎಸ್‌ಟಿಎಫ್), ಮತ್ತು ಪ್ಯಾರಾ ಮಿಲಿಟರಿ ಪಡೆಗಳು ಜಂಟಿ ಪಥಸಂಚಲನ ನಡೆಸಿದ್ದು, ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈಗಾಗಲೇ ಕನಿಷ್ಠ 80 ಜನರನ್ನು ಬಂಧಿಸಲಾಗಿದೆ ಮತ್ತು ಶಾಂತಿ ಕಾಪಾಡಲು ಸಮುದಾಯದ ಮುಖಂಡರೊಂದಿಗೆ ಸಭೆಗಳನ್ನು ಆಯೋಜಿಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ