ಬೆಂಗಳೂರು: ಇಂದು ಕರ್ನಾಟಕ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ ಇದೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.
ಇಂದು ಸಿಎಂ ಬೊಮ್ಮಾಯಿ ಅವರು ಕೊಪ್ಪಳ ಹಾಗೂ ತವರು ಕ್ಷೇತ್ರ ಶಿಗ್ಗಾಂವಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಚಾಲನೆ, ಕೆರೆಗಳಿಗೆ ನೀರು ತುಂಬುವ ಯೋಜನೆ, ಶಿಗ್ಗಾಂವಿ, ರಾಣೆಬೆನ್ನೂರಿನಲ್ಲಿ ಸರಕಾರಿ ಕಾರ್ಯಕ್ರಮಗಳನ್ನು ನಿಗದಿಪಡಿಸಲಾಗಿತ್ತು. ಚುನಾವಣಾ ದಿನಾಂಕ ಪ್ರಕಟ ಹಾಘೂ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳೂ ರದ್ದಾಗಿದೆ