Monday, January 20, 2025
Homeಟಾಪ್ ನ್ಯೂಸ್CONGRESS: ಡಿಕೆಶಿಗೆ ಸಿಎಂ ಕುರ್ಚಿ ಹಂಚಿಕೆ- ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದು ಹೀಗೆ..

CONGRESS: ಡಿಕೆಶಿಗೆ ಸಿಎಂ ಕುರ್ಚಿ ಹಂಚಿಕೆ- ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದು ಹೀಗೆ..

ಮಂಡ್ಯ: ಸಿಎಂ ಕುರ್ಚಿ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸ್ಪಷ್ಟನೆ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಬಂಡಬೋಯಿನಹಳ್ಳಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್ ತೀರ್ಮಾನದಂತೆ ನಾವು ನಡೆದುಕೊಳ್ಳುತ್ತೇವೆ. ನಮ್ಮ ಮಧ್ಯೆ ಯಾವ ಒಪ್ಪಂದವೂ ಆಗಿಲ್ಲ ಎಂದು ತಿಳಿಸಿದರು.

ಡಿಕೆಶಿ ಹೇಳಿದ್ದೇನು..?: ಕರ್ನಾಟಕದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ನಾನೀಗ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಮುಖ್ಯಮಂತ್ರಿ ಹುದ್ದೆ ಬಗ್ಗೆ ಈಗ ಮಾತನಾಡುವುದಿಲ್ಲ. ರಾಜ್ಯದ ಹಿತಕ್ಕಾಗಿ ಸಿದ್ದರಾಮಯ್ಯ ಅವರ ಜೊತೆಯಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆದರೆ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿ ನಮ್ಮ ನಡುವೆ ಒಪ್ಪಂದವಾಗಿರುವುದು ನಿಜ, ಸಮಯ ಬಂದಾಗ ಆ ಬಗ್ಗೆ ಮಾತನಾಡುವೆ ಎಂದು ಈ ಹಿಂದೆ ಡಿಕೆ ಶಿವಕುಮಾರ್ ಹೇಳಿದ್ದರು.

ಹೆಚ್ಚಿನ ಸುದ್ದಿ

error: Content is protected !!