Saturday, May 16, 2026
Homeಟಾಪ್ ನ್ಯೂಸ್CM SIDDARAMAIAH: ಶೃಂಗೇರಿ ಫಲಿತಾಂಶ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರುತ್ತೇವೆ: ಸಿಎಂ ಸಿದ್ದರಾಮಯ್ಯ

CM SIDDARAMAIAH: ಶೃಂಗೇರಿ ಫಲಿತಾಂಶ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರುತ್ತೇವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಕ್ರಿಮಿನಲ್ ಸಂಚು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಗಂಭೀರ ಆರೋಪ ಮಾಡಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಅನ್ಯಾಯದ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ ನಡೆಸುವುದಾಗಿ ಘೋಷಿಸಿದರು.

ಮತಪತ್ರಗಳನ್ನು ತಿದ್ದಿರುವ ಆರೋಪ
ಶೃಂಗೇರಿ ಮರು ಎಣಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರಿಗೆ ಬಿದ್ದಿದ್ದ 255 ಅರ್ಹ ಮತಗಳನ್ನು ಉದ್ದೇಶಪೂರ್ವಕವಾಗಿ ಅನರ್ಹಗೊಳಿಸಲಾಗಿದೆ ಎಂದು ಸಿಎಂ ಕಿಡಿಕಾರಿದರು. ಮತ ಎಣಿಕೆ ನಡೆದ ಸಮಯದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿತ್ತು. ತಮ್ಮ ಅಧಿಕಾರ ಬಳಸಿ ಸಿಬ್ಬಂದಿಯ ಮೂಲಕ ಮತಪತ್ರಗಳನ್ನು ತಿದ್ದುವ ಕೆಲಸ ಮಾಡಲಾಗಿದೆ. ಇದೊಂದು ವ್ಯವಸ್ಥಿತ ಸಂಚಾಗಿದ್ದು, ಶೃಂಗೇರಿ ಫಲಿತಾಂಶವನ್ನು ನಾವು ಕಾನೂನುಬದ್ಧವಾಗಿ ಪ್ರಶ್ನಿಸುತ್ತೇವೆ” ಎಂದು ಅವರು ಸ್ಪಷ್ಟಪಡಿಸಿದರು.

ರೈಲ್ವೆ ಇಲಾಖೆಯ ಉದ್ಯೋಗ ನೇಮಕಾತಿಯಲ್ಲಿ ಕನ್ನಡಿಗರನ್ನು ಕಡೆಗಣಿಸುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಸಿದ್ದರಾಮಯ್ಯ ಖಂಡಿಸಿದ್ದು,. ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡದಿರುವುದು ಕನ್ನಡಿಗರ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಉಪಚುನಾವಣೆ ಗೆಲುವು ಮತ್ತು ಸಿಎಂ ಬದಲಾವಣೆ
 ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸಾಧಿಸಿರುವ ಗೆಲುವು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಜನ ನೀಡಿದ ಮನ್ನಣೆಯಾಗಿದೆ. ವಿರೋಧ ಪಕ್ಷಗಳ ಯಾವುದೇ ಕುತಂತ್ರಗಳು ನಮ್ಮ ಮುಂದೆ ನಡೆಯುವುದಿಲ್ಲ. ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಅವಧಿಯನ್ನು ಯಶಸ್ವಿಯಾಗಿ ಪೂರೈಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ನಾಯಕತ್ವ ಬದಲಾವಣೆಯ ಕುರಿತು ಪ್ರತಿಕ್ರಿಯಿಸಿದ ಅವರು, “ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನನಗೆ ಯಾವುದೇ ಅಧಿಕೃತ ಮಾಹಿತಿಯಿಲ್ಲ. ಈ ವಿಷಯದಲ್ಲಿ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ” ಎಂದು ತಿಳಿಸಿದರು.

ಏನಿದು ಶೃಂಗೇರಿ ಪ್ರಕರಣ?
ಕಳೆದ ವಿಧಾನಸಭಾ ಚುನಾವಣೆಯ ಅಂಚೆ ಮತಗಳ ಎಣಿಕೆಯಲ್ಲಿ ಲೋಪವಾಗಿದೆ ಎಂದು ಆರೋಪಿಸಿ ಜೀವರಾಜ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಹಠ ಬಿಡದ ಅವರು ಸತತ ಮೂರು ವರ್ಷಗಳ ಕಾಲ ನಡೆಸಿದ ಕಾನೂನು ಸಮರಕ್ಕೆ ಈಗ ಫಲ ಸಿಕ್ಕಿದೆ. ಮರು ಎಣಿಕೆಯ ಅಂತಿಮ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕ್ಷೇತ್ರದಲ್ಲಿ ಜೀವರಾಜ್ ಅವರ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಆದರೆ, ಈ ವಿಜಯದ ಹಿಂದೆ ದೈವಿಕ ಶಕ್ತಿಯ ಆಶೀರ್ವಾದವಿದೆ ಎಂಬ ಮಾತುಗಳು ಈಗ ಕ್ಷೇತ್ರದಲ್ಲಿ ಬಲವಾಗಿ ಕೇಳಿಬರುತ್ತಿವೆ

ಇದನ್ನೂ ಓದಿ: ನಿಜವಾಯ್ತು ಶಬರಿಮಲೆ ಪೂಜಾರಿಯ ಭವಿಷ್ಯ! ಕೋರ್ಟ್ ಕದನ ಗೆದ್ದು ಶಾಸಕರಾದ ಡಿ.ಎನ್. ಜೀವರಾಜ್

ಹೆಚ್ಚಿನ ಸುದ್ದಿ

Change Language »
error: Content is protected !!