Tuesday, November 5, 2024
Homeಟಾಪ್ ನ್ಯೂಸ್Cm Siddaramaiah : ಶಕ್ತಿ ಯೋಜನೆ ಮರುಪರಿಶೀಲನೆ ಮಾಡುವ ಪ್ರಸ್ತಾವನೆ ಇಲ್ಲ - ಸಿಎಂ 

Cm Siddaramaiah : ಶಕ್ತಿ ಯೋಜನೆ ಮರುಪರಿಶೀಲನೆ ಮಾಡುವ ಪ್ರಸ್ತಾವನೆ ಇಲ್ಲ – ಸಿಎಂ 

ಶಕ್ತಿ ಯೋಜನೆಯನ್ನು ಪರಿಶೀಲನೆ ಮಾಡುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಶಕ್ತಿ ಯೋಜನೆಯನ್ನು ಮರುಪರಿಶೀಲನೆ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದರು.

ಈ ಬಗ್ಗೆ ಮಾತನಾಡಿದ ಅವರು, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ನಿನ್ನೆಯ ಕಾರ್ಯಕ್ರದಲ್ಲಿ ನಾನು ಇರಲಿಲ್ಲ. ನಾನು ಮಂತ್ರಿಗಳ ಜೊತೆ ಮಾತಾಡುತ್ತೇನೆ. ಪರಿಷ್ಕರಣೆಯ ಯಾವುದೇ ಉದ್ದೇಶವಿಲ್ಲ. ಆ ರೀತಿ ಪ್ರಸ್ತಾಪವೂ ಸರ್ಕಾರದ ಮುಂದೆ ಇಲ್ಲ ಎಂದರು

ಅಷ್ಟಕ್ಕೂ ಡಿಕೆಶಿ ಹೇಳಿದ್ದೇನು.?

ಬುಧವಾರ ವಿಧಾನ ಸೌಧದಲ್ಲಿ ಹೊಸ 20 ಐರಾವತ ಕ್ಲಬ್ ಕ್ಲಾಸ್ ಬಸ್ ಗಳಿಗೆ ಚಾಲನೆ ನೀಡಿ ಮಾತನಾಡಿದ ಡಿಕೆ ಶಿವಕುಮಾರ್,  ಅನೇಕ ಜನರು ನನಗೆ ಮೇಲ್, ಮೆಸೇಜ್ ಮಾಡಿ ನಾವು ಟಿಕೆಟ್‌ಗೆ ಹಣ ಕೊಡುವುದಕ್ಕೆ ಸಿದ್ದವಾಗಿದ್ದೇವೆ. ನಮಗೆ ಉಚಿತ ಪ್ರಯಾಣ ಬೇಡ ಎಂದು ಮೆಸೇಜ್ ಹಾಕಿದ್ದಾರೆ. ನಾವು ಟಿಕೆಟ್‌ಗೆ ದುಡ್ಡು ಕೊಡುತ್ತೇವೆ ಆದರೆ ಬಸ್‌ನಲ್ಲಿ ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳುತ್ತಿದ್ದಾರೆ.

ಅನೇಕರು ನಾವು ಟಿಕೆಟ್ ಹಣ ಕೊಡುವುದಕ್ಕೆ ಸಿದ್ಧ ಎಂದು ಪ್ರಾಮಾಣಿಕವಾಗಿ ಅಭಿಪ್ರಾಯ ಹೇಳುತ್ತಿದ್ದಾರೆ. ಹೀಗಾಗಿ ನಾವು, ರಾಮಲಿಂಗಾರೆಡ್ಡಿ, ಸರ್ಕಾರದಲ್ಲಿ ಎಲ್ಲಾ ಕೂತು ಈ ಬಗ್ಗೆ ಚರ್ಚೆ ಮಾಡಿ, ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು

ಹೆಚ್ಚಿನ ಸುದ್ದಿ

error: Content is protected !!