Thursday, March 27, 2025
Homeಟಾಪ್ ನ್ಯೂಸ್ಫುಡ್‌ ಕಿಟ್‌ ವಿತರಣೆ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಎಫ್‌ಐಆರ್‌

ಫುಡ್‌ ಕಿಟ್‌ ವಿತರಣೆ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಎಫ್‌ಐಆರ್‌

ಚುನಾವಣಾ ನೀತಿ ಸಂಹಿತೆ ಮಾಜಿ ಸಚಿವರಿಗೆ ಉರುಳಾಗುವ ಸಾಧ್ಯತೆ ಇದೆ. ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಜನರಿಗೆ ಫುಡ್​ ಕಿಟ್​ ಹಂಚಿಕೆ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ.

ಚುನಾವಣಾ ಅಧಿಕಾರಿ ಲಕ್ಷ್ಮಣ್ ನೀಡಿದ ದೂರಿನನ್ವಯ ಕೃಷ್ಣಯ್ಯ ಶೆಟ್ಟಿ ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಹೆಸರಿನಲ್ಲಿ ಫುಡ್​ ಕಿಟ್​ ಹಂಚಿಕೆಯಾಗಿದೆ. ಕಿಟ್​ ಹಂಚಿಕೆ ವೇಳೆ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು, ಪೊಲೀಸರು ದಾಳಿ ಮಾಡಿ 7 ಲಕ್ಷಕ್ಕೂ ಅಧಿಕ ಮೌಲ್ಯದ ಫುಡ್​​​ ಕಿಟ್​ಗಳನ್ನು ಜಪ್ತಿ ಮಾಡಿದ್ದಾರೆ

ಕೃಷ್ಣಯ್ಯ ಶೆಟ್ಟಿ ಅವರು ಗಾಂಧಿನಗರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಕೃಷ್ಣಯ್ಯ ಶೆಟ್ಟಿಗೆ ನೊಟೀಸ್ ನೀಡಲು ಮುಂದಾಗಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!