ನಿರೋದ್ಯೋಗಿ ಯುವಕರಿಗೆ ಕಾಂಗ್ರೆಸ್ ಪಕ್ಷ ಭರ್ಜರಿ ಭರವಸೆ ನೀಡಿದೆ. ಈಗಾಗಲೇ ಮಹಿಳೆಯರಿಗೆ ಎರಡು ಸಾವಿರ ರೂ, ಉಚಿತ ಅಕ್ಕಿ ಮತ್ತು ವಿದ್ಯುತ್ ಗ್ಯಾರಂಟಿ ನೀಡಿರುವ ಕಾಂಗ್ರೆಸ್, ಈಗ ನಿರೋದ್ಯೋಗಿ ಯುವಕರ ಪಾಲಿಗೆ ಹೊಸ ಭರವಸೆಯೊಂದನ್ನು ನೀಡಿದೆ. ನಿರುದ್ಯೋಗಿ ಯುವಕರಿಗೆ ಪ್ರತೀ ತಿಂಗಳೂ ಮೂರು ಸಾವಿರ ರುಪಾಯಿ ಭತ್ಯೆ ನೀಡೋದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಈ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ರೂ.3000 ಹಾಗೂ ಡಿಪ್ಲೊಮಾ ಮಾಡಿದವರಿಗೆ ರೂ.1500 ಪ್ರತೀ ತಿಂಗಳೂ ನೀಡೋದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ.
ಬೆಳಗಾವಿಯಲ್ಲಿ ಯುವಕ್ರಾಂತಿ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಯೋಜನೆಯನ್ನು ಘೋಷಿಸಿದ್ರು. ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಬೆಳಗಾವಿಯ ಎಲ್ಲಾ ಪ್ರಮುಖ ನಾಯಕರು ಉಪಸ್ಥಿತರಿದ್ರು