Saturday, April 26, 2025
Homeಕ್ರೈಂCONGRESS : ದಲಿತ ಮಹಿಳೆ ಮೇಲೆ ಹಲ್ಲೆ ಆರೋಪ, ಕೂಡಲೇ ರೇವಣ್ಣರನ್ನ ಬಂಧಿಸಿ ಎಂದ ಯತ್ನಾಳ್

CONGRESS : ದಲಿತ ಮಹಿಳೆ ಮೇಲೆ ಹಲ್ಲೆ ಆರೋಪ, ಕೂಡಲೇ ರೇವಣ್ಣರನ್ನ ಬಂಧಿಸಿ ಎಂದ ಯತ್ನಾಳ್

ಬೆಂಗಳೂರು : ಗ್ಯಾರಂಟಿ ಯೋಜನೆಗಳ ಅನಿಷ್ಠಾನ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಹೆಚ್.ಎಂ.ರೇವಣ್ಣ ಅವರ ವಿರುದ್ಧ  ಕಾಂಗ್ರೆಸ್ ಕಾರ್ಯಕರ್ತೆ ನಂದಿನ ನಾಗರಾಜ ಎಂಬ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಮಹಿಳೆ  ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಈಗಾಗಲೇ ಹೈಗ್ರೌಂಡ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಮಾತುಕತೆ ನಡೆಯುತ್ತಿದ್ದ ವೇಳೆ ನಂದಿನಿ ಅವರ ಮೇಲೆ ರೇವಣ್ಣ ಹಲ್ಲೆ ನಡೆಸಿದ್ದಾರೆನ್ನಲಾಗಿತ್ತು. ಈ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಅವರು ಟ್ವೀಟ್ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


SCSP/TSP ಅನುದಾನವನ್ನು ಪರಿಶಿಷ್ಟ ಜಾತಿ ವರ್ಗಗಳ ಕಲ್ಯಾಣಕ್ಕೆ ಬಳಸಬೇಕಾಗಿದ್ದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿ ಅನ್ಯಾಯವೆಸಗಿದೆ. ಅನುದಾನದ ಸುಮಾರು ರೂ.14,730 ಕೋಟಿಯನ್ನು ಗ್ಯಾರಂಟಿಗೆ ಕಾಂಗ್ರೆಸ್ ಬಳಸಿಕೊಂಡಿದೆ. ಹಣ ದುರ್ಬಳಕೆ ಮಾಡಿದ ನಂತರ ದಲಿತ ಹೆಣ್ಣುಮಕ್ಕಳಿಗೆ ಅನ್ಯಾಯವೆಸಗಿರುವುದು ಕಾಂಗ್ರೆಸ್ ಪಕ್ಷದ ದಲಿತ ವಿರೋಧಿ ನೀತಿಯನ್ನು ತೋರಿಸುತ್ತದೆ ಎಂದು ಕುಟುಕಿದ್ದಾರೆ.

ವೋಟ್ ಬ್ಯಾಂಕ್ ರಾಜಕಾರಣಕ್ಕೆ ದಲಿತರಿಗೆ ಅನ್ಯಾಯವೆಸಗುತ್ತಿರುವ ಕಾಂಗ್ರೆಸ್ ಸರ್ಕಾರ ಈಗ ತನ್ನದೇ ಸ್ವಪಕ್ಷದ ದಲಿತ ಹೆಣ್ಣು ಮಗಳಿಗೆ ಪಕ್ಷದ ಹಿರಿಯ ನಾಯಕ ಎನಿಸಿಕೊಂಡಿರುವ ಎಚ್.ಎಂ.ರೇವಣ್ಣ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಕೂಡಲೇ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಸ್ಥಾನದಿಂದ ರಾಜೀನಾಮೆ ಸಲ್ಲಿಸಿ, ನೊಂದ ಹೆಣ್ಣು ಮಗಳಿಗೆ ಕ್ಷಮಾಪಣೆಯನ್ನು ಕೇಳಬೇಕು. ರೇವಣ್ಣ ಅವರನ್ನು ಪೊಲೀಸರು ಕೂಡಲೇ ದಸ್ತಗಿರಿ ಮಾಡಿ ತನಿಖೆಗೆ ಒಳಪಡಿಸಬೇಕು ಎಂದು ಯತ್ನಾಳ್ ಆಗ್ರಹಿಸಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!