Thursday, July 4, 2024
Homeಟಾಪ್ ನ್ಯೂಸ್MALLIKARJUN KHARGE: ರಾಹುಲ್ ಗಾಂಧಿಗೆ ಅಭದ್ರತೆ: ಅಮಿತ್​ ಶಾಗೆ ಖರ್ಗೆ ಪತ್ರ

MALLIKARJUN KHARGE: ರಾಹುಲ್ ಗಾಂಧಿಗೆ ಅಭದ್ರತೆ: ಅಮಿತ್​ ಶಾಗೆ ಖರ್ಗೆ ಪತ್ರ

ನವದೆಹಲಿ: ಅಸ್ಸಾಂನಲ್ಲಿ (Assam) ಭಾರತ್ ಜೋಡೋ ನ್ಯಾಯ ಯಾತ್ರೆ (Bharath Jodo Nyay Yatre) ವೇಳೆ ಕಾಂಗ್ರೆಸ್​ (congress) ಸಂಸದ ರಾಹುಲ್ ಗಾಂಧಿ (Rahul Gandhi) ಎದುರಿಸಿರುವ ಭದ್ರತಾ ಲೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕೇಂದ್ರ ಗೃಹ ಸಚಿವ ಅಮಿತ್​ ಶಾಗೆ ಪತ್ರ ಬರೆದಿದ್ದಾರೆ.

ಅಸ್ಸಾಂ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ ಮತ್ತು ಕೆಲವೊಮ್ಮೆ ಕಾರ್ಯಕರ್ತರ ಬೆಂಗಾವಲು ವಾಹನವನ್ನು ಪ್ರವೇಶಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಭದ್ರತೆಗೆ ಅಪಾಯವಿದೆ ಎಂದಿದ್ದಾರೆ. ಸಚಿವ ಅಮಿತ್ ಶಾ (Amit Shah) ಮಧ್ಯಪ್ರವೇಶಿಸಿ ರಾಹುಲ್ ಗಾಂಧಿ ಹಾಗೂ ಯಾತ್ರೆಯಲ್ಲಿ ಭಾಗವಹಿಸುವವರ ಸುರಕ್ಷತೆಯನ್ನು ಖಾತ್ರಿಪಡಿಸುವಂತೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ದೈಹಿಕ ಹಾನಿಗೆ ಕಾರಣವಾಗುವ ಯಾವುದೇ ಅಹಿತಕರ ಘಟನೆಗಳನ್ನು ತಡೆಯಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಮತ್ತು ಅಸ್ಸಾಂನ ಪೊಲೀಸ್ ಮಹಾನಿರ್ದೇಶಕರನ್ನು ವಿನಂತಿಸುತ್ತೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ಭಾರತ್ ಜೋಡೋ ನ್ಯಾಯ ಯಾತ್ರೆಯು ಜನವರಿ 14 ರಂದು ಮಣಿಪುರದ ಇಂಫಾಲ್ ನಿಂದ ಪ್ರಾರಂಭವಾಯಿತು ಮತ್ತು ಮುಂಬೈನಲ್ಲಿ ಕೊನೆಗೊಳ್ಳುವ ಈ ಯಾತ್ರೆ 6,700 ಕಿಲೋಮೀಟರ್‌ಗಳನ್ನು ಕ್ರಮಿಸಲು ಸಿದ್ಧವಾಗಿದೆ, ಸಮಾಜದ ದುರ್ಬಲ ವರ್ಗಗಳನ್ನು ಒಗ್ಗೂಡಿಸುವುದರೊಂದಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸಮಸ್ಯೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ.

ಹೆಚ್ಚಿನ ಸುದ್ದಿ