Monday, April 13, 2026
Homeಟಾಪ್ ನ್ಯೂಸ್MALLIKARJUN KHARGE : ಬಾಯಿ ಮುಚ್ಕೊಂಡು ಆಡಳಿತ ನಡೆಸಿ - ರಾಜ್ಯ ಕೈ ನಾಯಕರಿಗೆ ಖರ್ಗೆ...

MALLIKARJUN KHARGE : ಬಾಯಿ ಮುಚ್ಕೊಂಡು ಆಡಳಿತ ನಡೆಸಿ – ರಾಜ್ಯ ಕೈ ನಾಯಕರಿಗೆ ಖರ್ಗೆ ವಾರ್ನಿಂಗ್‌!

ಬೆಂಗಳೂರು : ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಪಕ್ಷದಲ್ಲಿ ಅಸಮಾಧಾನ ಕೇಳಿ ಬರುತ್ತಲೇ ಇದೆ. ಇದೀಗ ನಾಯಕತ್ವ ಬದಲಾವಣೆಯ ಬಗ್ಗೆ ಎರಡು ಬಣಗಳ ನಡುವೆ ನಡೆಯುತ್ತಿರುವ ಕಿತ್ತಾಟಕ್ಕೆ ಬ್ರೇಕ್ ಹಾಕುವಂತೆ ಶಾಸಕರಿಗೆ, ಸಚಿವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ (Mallikarjun Karge) ಖಡಕ್ ಎಚ್ಚರಿಕೆ ನೀಡಿದ್ದಾರೆ.

ವಿಧಾನ ಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿಗಳಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷದಲ್ಲಿ ಆರಂಭದಿಂದಲೂ ಕೂಡ ಸಿಎಂ ಸ್ಥಾನಕ್ಕೆ ಪೈಪೋಟಿ ನಡೆಯುತ್ತಲೇ ಇತ್ತು.. ಆದರೆ ಹೈಕಮಾಂಡ್ ಸೂಚನೆಯ ಮೇರೆಗೆ ಸಿಎಂ ಸ್ಥಾನ ಕೂಗು ಸ್ವಲ್ಪ ಕಡಿಮೆಯಾಗಿತ್ತು..

ಆದರೆ ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಿಕ್ಕೆ ಬಂದು ಎರಡು ವರ್ಷ ಪೂರೈಸಿದ್ದು, ಅದರಂತೆ ಅಧಿಕಾರ ಬದಲಾವಣೆಯಾಗಬೇಕು ಎಂದು ತಮ್ಮ ಪಕ್ಷದ ನಾಯಕರೇ ಪಟ್ಟು ಹಿಡಿದಿದ್ದಾರೆ. ಆದರೆ ಇದೀಗ ಇವೆಲ್ಲದಕ್ಕೂ ಹೈಕಮಾಂಡ್ ಬ್ರೇಕ್ ಹಾಕಿದೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಕೂಗು ಕೇಳಿ ಬರುತ್ತಿದ್ದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಕ್ಲಾಸ್ ತೆಗೆದುಕೊಂಡಿದ್ದು, ಚುನಾವಣೆ ಪೂರ್ವ ಭರವಸೆಗಳನ್ನು ಈಡೇರಿಸುವುದು ಮತ್ತು ಉತ್ತಮ ಆಡಳಿತ ನೀಡುವುದು ಸರ್ಕಾರದ ಆದ್ಯತೆಯಾಗಬೇಕು. ಕುರ್ಚಿ ಕಲಹ ಮುಂದುವರೆದರೆ ಸರ್ಕಾರದ ಸ್ಥಿರತೆಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಸಚಿವರು ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕು, ಇಲ್ಲದಿದ್ದರೆ ಸಂಪುಟದಿಂದ ಕಿತ್ತು ಹಾಕಲಾಗುವುದು ಎಂದು ಡೈರೆಕ್ಟ್ ಆಗಿ ವಾರ್ನಿಂಗ್ ನೀಡಿದ್ದಾರೆ.

ಅಷ್ಟೇ ಅಲ್ಲದೆ ನಾಯಕತ್ವ ಬದಲಾವಣೆಯ ಯಾರು ಮಾತನಾಡಬಾರದು.. ಅದನ್ನು ಏನೇ ಇದ್ದರೂ ಹೈಕಮಾಂಡ್ ನೋಡಿಕೊಳ್ಳುತ್ತೆ.. ಸುಮ್ಮನೆ ತಮ್ಮ ತಮ್ಮ ಕೆಲಸವನ್ನು ಮಾಡುವುದರ ಕಡೆ ಗಮನಕೊಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಅಷ್ಟೇ ಅಲ್ಲದೆ ಕಳೆದ ವಾರ ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರಿಗೂ ಕಿವಿ ಮಾತು ಹೇಳಿದ್ದ ಮಲ್ಲಿಕಾರ್ಜುನ್ ಖರ್ಗೆ ಅವರು ಯಾರು ಏನೇ ಹೇಳಿದರೂ ಸದ್ಯ ನಾಯಕತ್ವ ಬದಲಾವಣೆ ಮಾಡುವುದಿಲ್ಲ ಎಂದು ಸೂಚನೆ ನೀಡಿದ್ದಾರೆ.

ಇದನ್ನು ಓದಿ : ಮೋದಿ ನಂಬರ್ ಓನ್ ಸುಳ್ಳುಗಾರ : ಪ್ರಧಾನಿ ವಿರುದ್ಧ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ಜೊತೆಗೆ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸುವ ಕಡೆ ಹಾಗೂ ಉತ್ತಮ ಅಧಿಕಾರ ನಡೆಸುವ ಕಡೆ ಗಮನ ಕೊಡಿ.. ಪಕ್ಷದಲ್ಲೇ ಗುಂಪುಗಾರಿಕೆ, ಕಿತ್ತಾಟ ಹೆಚ್ಚಾದರೆ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ.. ಹೀಗಾಗಿ ಐದು ವರ್ಷ ಉತ್ತಮ ಆಡಳಿತ ನಡೆಸಿ ಎಂದು ಖರ್ಗೆ ತಿಳಿಹೇಳಿದ್ದಾರೆ.

ಹೆಚ್ಚಿನ ಸುದ್ದಿ

Change Language »
error: Content is protected !!