ಕಾಂಗ್ರೆಸ್ ಬಿಜೆಪಿ ಪಕ್ಷಗಳು ಒಟ್ಟಾಗಿ ಜೆಡಿಎಸ್ ವಿರುದ್ಧ ಷಡ್ಯಂತ್ರ ರೂಪಿಸಿವೆ ಎಂದು ಮಾಜಿ ಸಿಎಂ ಹೆಚ್‌ಡಿಕೆ ಆರೋಪಿಸಿದ್ದಾರೆ. ಎರಡೂ ಪಕ್ಷಗಳು ನಮ್ಮ ವಿರುದ್ಧ ಒಳ ಒಪ್ಪಂದ ಆರೋಪ ಮಾಡಿವೆ. ಇನ್ನಾದರೂ ಈ ರಾಷ್ಟ್ರೀಯ ಪಕ್ಷಗಳು ಒಳ ಒಪ್ಪಂದ ಆರೋಪಕ್ಕೆ ಫುಲ್‌ಸ್ಟಾಪ್ ಇಡಬೇಕು ಎಂದಿದ್ದಾರೆ.
ಕಾಂಗ್ರೆಸ್ ನಾಯಕರ ಜತೆ ಜೆಡಿಎಸ್ ಮಾತುಕತೆ ಆಗಿದೆ ಎಂದು ಸಿಎಂ ಹೇಳ್ತಾರೆ. ಬಿಜೆಪಿ ಜತೆ ಜೆಡಿಎಸ್ ಒಳ ಒಪ್ಪಂದ ಆಗಿದೆ ಎಂದು ಸಿದ್ದರಾಮಯ್ಯ ಹೇಳ್ತಾರೆ. ನಾವು ಎಲ್ಲಿ ಬಿಜೆಪಿ ಜತೆ ಹೋಗ್ತಾರೆ ಅಂತ ಕಾಂಗ್ರೆಸ್‌ನವರಿಗೆ, ಕಾಂಗ್ರೆಸ್ ಜತೆ ಎಲ್ಲಿ ಹೋಗ್ತಾರೆ ಅಂತ ಬಿಜೆಪಿಯವರಿಗೆ ಭಯವಿದೆ. ಹೀಗಾಗಿ ಪದೇಪದೆ ನಮ್ಮನ್ನು ಕೆಣಕುತ್ತಿದ್ದಾರೆ ಎಂದು ಹೆಚ್‌ಡಿಕೆ ಹೇಳಿದ್ದಾರೆ.
ನನ್ನ ಮೈತ್ರಿ ಸರಕಾರ ಉರುಳಿಸಲು ಹಣ ಕೊಟ್ಟ ವ್ಯಕ್ತಿಗೆ ಮದ್ದೂರುನಲ್ಲಿ ಕಾಂಗ್ರೆಸ್ ಪಕ್ಷ ಟಿಕೆಟ್ ಕೊಡಲು ಮುಂದಾಗಿದೆ ಎಂದು ಅವರು ಆರೋಪಿಸಿದ್ದಾರೆ.