Thursday, March 27, 2025
Homeಬೆಂಗಳೂರು“ಯುವಮತ” ಅಭಿಯಾನಕ್ಕೆ ಕಾಂಗ್ರೆಸ್ ಚಾಲನೆ

“ಯುವಮತ” ಅಭಿಯಾನಕ್ಕೆ ಕಾಂಗ್ರೆಸ್ ಚಾಲನೆ

ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 18 ರಿಂದ 23 ವರ್ಷ ವಯಸ್ಸಿನ, ಅದರಲ್ಲೂ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಮತದಾರರನ್ನು ಸೆಳೆಯಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ “ಯುವ ಮತ”- ನಿಮ್ಮ ಮೊದಲ ಮತವನ್ನು ಸಂಭ್ರಮಿಸಿ ಅಭಿಯಾನ ಆರಂಭಿಸಿದೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಏಐಸಿಸಿ ಪ್ರಧಾನ ಕಾರ್ಯದರ್ಶಿ ಅಭಿಶೇಖ್ ದತ್ತ್ ಹಾಗೂ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರನ್ನು ಸೆಳೆಯಲು ರಾಜ್ಯದ ಉಸ್ತುವಾರಿಯಾಗಿ ನೇಮಕಗೊಂಡಿರುವ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರು “ಯುವ ಮತ” ಜಾಲತಾಣವನ್ನು ಲೋಕಾರ್ಪಣೆ ಮಾಡಿದರು. ಈ ಮೂಲಕ ರಾಜ್ಯಾದ್ಯಂತ ಯುವ ಮತದಾರರಿಗೆ ಧ್ವನಿಯಾಗಲು ಯುವ ಕಾಂಗ್ರೆಸ್ ನಿಂದ ಎಲ್ಲಾ ಶಾಲಾ, ಕಾಲೇಜು, ವಿಶ್ವವಿದ್ಯಾಲಯಗಳು, ಸಾಮಾಜಿಕ, ಸಾಂಸ್ಕೃತಿ ಕಾರ್ಯಕ್ರಮಗಳು, ಮತ್ತಿತರ ಭಾಗಗಳಲ್ಲಿ ವ್ಯಾಪಕ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಿದೆ ಎಂದು ಅಭಿಶೇಖ್ ದತ್ತ್ ಹೇಳಿದ್ರು

ಹೆಚ್ಚಿನ ಸುದ್ದಿ

error: Content is protected !!